ಕ್ರಿಯೇಟಿವ್ ಕಾಲೇಜಿನಲ್ಲಿ ಗಾಂಧಿ – ಶಾಸ್ತ್ರಿ ಜಯಂತಿ ಆಚರಣೆ

ಕಾರ್ಕಳ : ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಆಚರಣೆ ನಡೆಯಿತು. ಗಾಂಧೀಜಿ ಮತ್ತು ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಕಾಲೇಜಿನ ಸಹ ಸಂಸ್ಥಾಪಕ ಗಣಪತಿ ಭಟ್ ಕೆ. ಎಸ್., ದೇಶದ ಸ್ವಾತಂತ್ರ‍್ಯಕ್ಕಾಗಿ ಅನೇಕ ಮಹನೀಯರು ಅವಿರತ ಪರಿಶ್ರಮ ಪಟ್ಟಿದ್ದಾರೆ. ಜೈ ಜವಾನ್, ಜೈ ಕಿಸಾನ್ ಘೋಷಣೆಯ ಮೂಲಕ ಇಡೀ ರಾಷ್ರ‍್ಟದಲ್ಲಿ ಬದಲಾವಣೆ ತಂದ ಶಾಸ್ತ್ರಿಯವರ ಸರಳತೆ ಹಾಗೂ ಬ್ರಿಟೀಷರ ವಿರುದ್ದ ಅಹಿಂಸಾ ಮಾರ್ಗದಿಂದ ಸ್ವಾತಂತ್ರ‍್ಯ ಗಳಿಸುವ ಪರಿಕಲ್ಪನೆಯ ಮೂಲಕ ದೇಶದ ಜನರನ್ನು ಒಗ್ಗೂಡಿಸಿದ ಮಹಾತ್ಮ ಗಾಂಧೀಜಿಯವರ ಜೀವನವೇ ನಮಗೆಲ್ಲ ಮಾರ್ಗದರ್ಶನ. ಅವರಂತೆ ನಾವೂ ನಮ್ಮ ಬದುಕಿನಲ್ಲಿ ಸರಳತೆಯನ್ನು ಅಳವಡಿಸಿಕೊಳ್ಳೋಣ ಎಂದರು. ಸಂಸ್ಥೆಯ ಉಪನ್ಯಾಸ ವರ್ಗ ಮತ್ತು ವಿದ್ಯಾರ್ಥಿಗಳು ಗಾಂಧೀಜಿ ಮತ್ತು ಶಾಸ್ತ್ರೀಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.















































































error: Content is protected !!
Scroll to Top