ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮ ಗಾಂಧೀಜಿ ಹಾಗೂ ಶಾಸ್ತ್ರಿ ಜನ್ಮದಿನಾಚರಣೆ

ಕಾರ್ಕಳ : ಬ್ಲಾಕ್ ಕಾಂಗ್ರೆಸ್ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆಯನ್ನು ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು. ಈ ಸಂದರ್ಭ ಕಾಂಗ್ರೆಸ್ ಮುಂಖಡ ಉದಯ್ ಶೆಟ್ಟಿ ಮಾತನಾಡಿ, ಪ್ರಪಂಚದಲ್ಲಿಯೇ ಶಸ್ತ್ರರಹಿತ ಹೋರಾಟದ ಮೂಲಕ ಸ್ವಾತಂತ್ರ್ಯ ದೊರಕಿಸಿಕೊಟ್ಟವರು ಮಹಾತ್ಮ ಗಾಂಧೀಜಿ. ಅವರ ಜೀವನ ಸಾರ್ವಕಾಲಿಕ ಅನುಕರಣೀಯ. ಅಹಿಂಸೆ, ತ್ಯಾಗ ಮತ್ತು ಉಪವಾಸ ಸತ್ಯಾಗ್ರಹದ ಮೂಲಕ ಅವರು ನೀಡಿದ ಸಂದೇಶಗಳನ್ನು ವಿಶ್ವದ ಎಲ್ಲಾ ನಾಯಕರು ಒಪ್ಪಿಕೊಂಡಿದ್ದಾರೆ. ಅಂತಹ ಮಹಾನ್ ವ್ಯಕ್ತಿತ್ವ ಎಂದಿಗೂ ಸ್ಫೂರ್ತಿದಾಯಕ ಎಂದರು.

ಅದ್ಯಕ್ಷತೆ ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಸದಾಶಿವ ದೇವಾಡಿಗ ಮಾತನಾಡಿ, ಜೈ ಜವಾನ್, ಜೈ ಕಿಸಾನ್ ಘೋಷಣೆಯ ಮೂಲಕ ಶಾಸ್ತ್ರಿಯವರು ದೇಶದಲ್ಲಿ ಕ್ರಾಂತಿಯನ್ನೇ ಮಾಡಿದರು. ಇದರ ಪರಿಣಾಮವಾಗಿಯೇ ಆಹಾರ ಉತ್ಪಾದನೆ ಹೆಚ್ಚಾಗಿ ಅಭಿವೃದ್ಧಿಗೆ ಸಹಕಾರಿಯಾಯಿತು. ಅವರ ಸರಳ ಜೀವನ ಎಲ್ಲರಿಗೂ ಆದರ್ಶ ಎಂದರು.

ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಜಾರ್ಜ್ ಕ್ಯಾಸ್ಟಲಿನೊ, ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಮಾಲಿನಿ ರೈ, ದ.ಕ.ಹಾಲು ಒಕ್ಕೂಟದ ನಿರ್ದೇಶಕ ಸುದಾಕರ್ ಶೆಟ್ಟಿ, ಗ್ರಾಮೀಣ ಸಮಿತಿ ಅದ್ಯಕ್ಷ ಥೋಮಸ್ ಮಸ್ಕರೇನಸ್, ಪುರಸಭಾ ಸದಸ್ಯರಾದ ಪ್ರತಿಮಾ ರಾಣೆ, ರೆಹಮತ್, ನಳಿನಿ ಆಚಾರ್ಯ, ಸೋಮನಾಥ್ ನಾಯಕ್, ಕಾನೂನು ಘಟಕದ ರೆಹಮತ್ತುಲ್ಲಾ, ಸೇವಾದಳದ ಅಬ್ದುಲ್ಲಾ ಸಾಣೂರು, ಎಸ್‌ಸಿ ಘಟಕದ ಅಣ್ಣಪ್ಪ ನಕ್ರೆ, ಸುಬಿತ್ ಎನ್‌. ಆರ್., ಆರೀಪ್ ಕಲ್ಲೊಟ್ಟೆ, ಸುನೀಲ್ ಭಂಡಾರಿ, ಶೋಭಾ, ರಿನಾ ಕ್ಯಾಸ್ಟಲಿನೊ, ಕಾಂತಿ ಶೆಟ್ಟಿ, ಪ್ರಿಯಾ, ಸತೀಶ್ ದೇವಾಡಿಗ, ರಾಜೇಂದ್ರ, ಸಂದೀಪ್ ಶೆಟ್ಟಿ, ದೀಪಕ್ ಶೆಟ್ಟಿ ಹಾಗೂ ವಿವಿದ ಘಟಕದ ಅದ್ಯಕ್ಷರು, ಚುನಾಯಿತ ಜನಪ್ರತಿನಿಧಿಗಳು, ಗ್ರಾಮಿಣ ಸಮಿತಿಯ ಅಧ್ಯಕ್ಷರುಗಳು ಉಪಸ್ಥಿತರಿದ್ದರು. ವಕ್ತಾರ ಶುಭದರಾವ್ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯದರ್ಶಿ ಪ್ರಭಾಕರ ಬಂಗೇರ ವಂದಿಸಿದರು.















































































error: Content is protected !!
Scroll to Top