ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ

ಮೂಡುಬಿದಿರೆ : ಕಲ್ಲಬೆಟ್ಟು ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಕನ್ನಡ ವಿಭಾಗದ ಪ್ರಾಧ್ಯಾಪಕ ನಿತಿನ್ ಪಿ. ಎಸ್.‌ ಅವರು ಗಾಂಧೀಜಿಯವರ ಜೀವನಾದರ್ಶಗಳ ಬಗ್ಗೆ ತಿಳಿಸಿದರು. ಕಾಲೇಜು ಪ್ರಾಂಶುಪಾಲ, ಡಾ. ಎಸ್. ಎನ್. ವೆಂಕಟೇಶ್ ನಾಯಕ್, ಉಪ ಪ್ರಾಂಶುಪಾಲೆ ಡಾ. ರಶ್ಮಿ ಅರಸ್, ನಿರ್ದೇಶಕರಾದ ಯೋಗೇಶ್ ಬೇಡೇಕರ್, ಸುಭಾಷ್ ಝಾ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಬಳಿಕ ವಿದ್ಯಾರ್ಥಿಗಳಿಂದ ಸ್ವಚ್ಚತಾ ಹೀ ಸೇವಾ ಯೋಜನೆಯಡಿಯಲ್ಲಿ ಕಾಲೇಜು ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.















































































error: Content is protected !!
Scroll to Top