ಕಾರ್ಕಳ : ದಕ್ಷಿಣ ಕನ್ನಡ ಜಿಲ್ಲಾಡಳಿತ, ಮಂಗಳೂರು ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕುಸ್ತಿ ಸ್ಪರ್ಧೆಯಲ್ಲಿ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ರಚನಾ ಪದ್ಮಶಾಲಿ ಮತ್ತು ಅಂಕಿತ ಶೆಟ್ಟಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಇದೇ ಪಂದ್ಯಾಟದಲ್ಲಿ ಸಂಸ್ಥೆಯ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಲಾವಣ್ಯ ಶೆಟ್ಟಿ ಅವರು ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕ್ರೈಸ್ಟ್‌ಕಿಂಗ್ : ಕುಸ್ತಿಯಲ್ಲಿ ಇಬ್ಬರು ವಿದ್ಯಾರ್ಥಿಗಳು ಹಾಗೂ ವೈಟ್‌ಲಿಫ್ಟಿಂಗ್‌ನಲ್ಲಿ ದೈಹಿಕ ಶಿಕ್ಷಕಿ ರಾಜ್ಯಮಟ್ಟಕ್ಕೆ


































