ಕಾರ್ಕಳ : ಬೋಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಬರೆಬೈಲು ಎಂಬಲ್ಲಿ ರಬ್ಬರ್ ಸ್ಮೋಕ್ ಹೌಸ್‌ನಲ್ಲಿ ಅ. 4 ರಂದು ಅಗ್ನಿ ಅವಘಡ ಸಂಭವಿಸಿದೆ. ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಬ್ಬರ್ ಶೀಟ್ ಮಾಡಲು ಹಾಕಿದ್ದ ಬೆಂಕಿ ಕಟ್ಟಡಕ್ಕೆ ತಗುಲಿ ಅವಘಡ ಸಂಭವಿಸಿದೆ. ಪರಿಣಾಮವಾಗಿ 50 ರಬ್ಬರ್ ಶೀಟ್, ಕಟ್ಟಡದ ಮೇಲ್ಛಾವಣಿಗೆ ಹಾಕಿದ್ದ ಶೀಟ್ ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಕಾರ್ಮಿಕರು ಅಪಾಯದಿಂದ ಪಾರಾಗಿದ್ದಾರೆ.
ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಬೀ. ಎಂ. ಸಂಜೀವ್, ಸಿಬ್ಬಂದಿ ಸುರೇಶ್, ಜಯಮೂಲ್ಯ, ಕೇಶವ್, ಸುಜಯ್, ವಿನಾಯಕ್ ಪಾಲ್ಗೊಂಡಿದ್ದರು.
ಬೋಳ : ರಬ್ಬರ್ ಸ್ಮೋಕ್ ಹೌಸ್‌ನಲ್ಲಿ ಅಗ್ನಿ ಅವಘಡ


































