ಕಾರ್ಕಳ : ತಾಲೂಕು ಆರೋಗ್ಯ ಅಧಿಕಾರಿ ಡಾ. ಕೃಷ್ಣಾನಂದ ಶೆಟ್ಟಿ ಅವರು ಉಡುಪಿ ಜಿಲ್ಲಾ ತುರ್ತುಚಿಕಿತ್ಸಾ ವೈದ್ಯಾಧಿಕಾರಿ ಹುದ್ದೆಗೆ ಅ. 3 ರಂದು ವರ್ಗಾವಣೆಯಾಗಿದ್ದಾರೆ. ಇವರು 2010 ರಿಂದ 2023 ರವರೆಗೆ ಕಾರ್ಕಳ ತಾಲೂಕು ಆರೋಗ್ಯಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು.
ಪಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ವೈದ್ಯಾಧಿಕಾರಿ ಡಾ. ಅರುಣಾ ಅವರು ಪ್ರಸ್ತುತ ಪ್ರಭಾರ ತಾಲೂಕು ಆರೋಗ್ಯ ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ವರ್ಗಾವಣೆ ಹೊಂದಿದ ಡಾ. ಕೃಷ್ಣಾನಂದ ಶೆಟ್ಟಿಯವರಿಗೆ ಅ. 4 ರಂದು ಕಾರ್ಕಳ ತಾಲೂಕು ಸರಕಾರಿ ನೌಕರರ ಸಂಘದಲ್ಲಿ ತಾಲೂಕಿನ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಂದ ಬೀಳ್ಕೋಡುಗೆ ಸಮಾರಂಭ ಜರುಗಿತು.































