ಪಿಎಂ ಉಜ್ವಲ ಯೋಜನೆಯಡಿ ಎಲ್​ಪಿಜಿಗೆ ಸಬ್ಸಿಡಿ ಮೊತ್ತ 300 ರೂ. ಗೆ ಹೆಚ್ಚಳ

ದೆಹಲಿ : ಪಿಎಂ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಎಲ್​ಪಿಜಿ ಸಿಲಿಂಡರ್ ದರದಲ್ಲಿ ಸಿಗುವ ಸಬ್ಸಿಡಿ ಮೊತ್ತವನ್ನು ಕೇಂದ್ರ ಸರಕಾರ ಹೆಚ್ಚಿಸಿದೆ. 200 ರೂ. ನಷ್ಟು ನೀಡಲಾಗುತ್ತಿದ್ದ ಸಬ್ಸಿಡಿಯನ್ನು 300 ರೂಪಾಯಿಗೆ ಏರಿಸಲಾಗಿದೆ. ಇಂದ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಪಿಎಂ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಎಲ್​ಪಿಜಿ ಸಬ್ಸಿಡಿ ಏರಿಸಿರುವ ವಿಚಾರವನ್ನು ತಿಳಿಸಿದ್ದಾರೆ.

ಪಿಎಂ ಉಜ್ವಲ ಯೋಜನೆ ಹೊಂದಿರುವವರಿಗೆ ಸರ್ಕಾರ ಈ ಹಿಂದೆಯೇ 200 ರೂನಷ್ಟು ಸಬ್ಸಿಡಿ ಕೊಟ್ಟಿದೆ. ಈಗ ಮತ್ತಷ್ಟು 100 ರೂ ಸಬ್ಸಿಡಿ ಒದಗಿಸುತ್ತದೆ. ಅಲ್ಲಿಗೆ ಈ ಯೋಜನೆಯ ಫಲಾನುಭವಿಗಳಿಗೆ ಒಟ್ಟು 300 ರೂ ಸಬ್ಸಿಡಿ ಸಿಗುತ್ತದೆ.







































































error: Content is protected !!
Scroll to Top