ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : ಆರೋಪಿಗಳಿಗಿಲ್ಲ ಜಾಮೀನು

ಮೂವರು ಆರೋಪಿಗಳ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ತಿರಸ್ಕೃತ

ಬೆಂಗಳೂರು: ಸುಳ್ಯ ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಜಾಮೀನು ನೀಡಲು ಹೈಕೋರ್ಟ್‌ ನಿರಾಕರಿಸಿದೆ.
ನ್ಯಾಯಮೂರ್ತಿ ಎಚ್‌.ಬಿ. ಪ್ರಭಾಕರ್‌ ಶಾಸ್ತ್ರಿ, ನ್ಯಾ. ಅನಿಲ್‌ ಕೆ.ಕಟ್ಟಿ ಅವರಿದ್ದ ವಿಭಾಗೀಯ ಪೀಠ ಪ್ರವೀಣ್‌ ನೆಟ್ಟಾರು ಹತ್ಯೆ ಸಂಬಂಧ ಸಂಚಿನಲ್ಲಿ‌ ಸೆರೆಯಾದ ಆರೋಪಿಗಳಾದ ಕೆ.ಇಸ್ಮಾಯಿಲ್‌ ಶಫಿ, (ಆರೋಪಿ 9), ಕೆ.ಮೊಹಮ್ಮದ್‌ ಇಕ್ಬಾಲ್‌ (ಆರೋಪಿ 10) ಹಾಗೂ ಎಂ.ಶಾಹೀದ್‌ (ಆರೋಪಿ 11) ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ.
ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ 2022ರ ಜುಲೈ 26 ರಂದು ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಅವರನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು. ಇಡೀ ದೇಶದಲ್ಲಿ ಸಂಚಲನ ಮೂಡಿಸಿದ್ದ ಈ ಪ್ರಕರಣ ರಾಜಕೀಯ ಪಲ್ಲಟಗಳಿಗೂ ಕಾರಣವಾಗಿದೆ.





























































































































error: Content is protected !!
Scroll to Top