ಯೋಗಾಸನ ಸ್ಪರ್ಧೆ : ಜ್ಞಾನಸುಧಾದ ಅನ್ವಿ ಎಚ್.‌ ಅಂಚನ್‌ ರಾಜ್ಯ ಮಟ್ಟಕ್ಕೆ

ಕಾರ್ಕಳ : ಕೊಡಗು ಜಿಲ್ಲಾ ಪಂಚಾಯತ್‌, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಅ. 4 ರಂದು ಕೂಡಿಗೆ ಸರಕಾರಿ ಕ್ರೀಡಾ ವಸತಿ ಶಾಲೆಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಜ್ಞಾನಸುಧಾದ ವಿದ್ಯಾರ್ಥಿನಿ ಅನ್ವಿ ಎಚ್.‌ ಅಂಚನ್‌ ಕಲಾತ್ಮಕ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಜೋಡಿ ಲಯಬದ್ಧ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಕಾರ್ಕಳದ ಹರೀಶ್‌ ಹಾಗೂ ಶೋಭಾ ದಂಪತಿ ಪುತ್ರಿ.
ಸಾಧಕ ವಿದ್ಯಾರ್ಥಿನಿಗೆ ಅಜೆಕಾರು ಪದ್ಮಗೋಪಾಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ ಹಾಗೂ ಸಂಸ್ಥೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.































error: Content is protected !!
Scroll to Top