ಲಾರಿ ಮಾಲಕ-ಚಾಲಕರ 11 ದಿನಗಳ ಮುಷ್ಕರಕ್ಕೆ ಪರಿಹಾರ ಸಿಗುವ ನಿರೀಕ್ಷೆ
ಕಾರ್ಕಳ : ಉಡುಪಿ ಜಿಲ್ಲೆಯಲ್ಲಿ ಲಾರಿ ಮಾಲಕ-ಚಾಲಕರ ಒಕ್ಕೂಟದ ನೇತೃತ್ವದಲ್ಲಿ ನಡೆಯುತ್ತಿರುವ ಮುಷ್ಕರಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ವಿಶೇಷ ಸಭೆ ನಡೆಯಲಿದೆ.
ಉಡುಪಿಯಲ್ಲಿ ಉಂಟಾಗಿರುವ ಮರಳು, ಕೆಂಪು ಕಲ್ಲು ಸಾಗಾಟ ಸಮಸ್ಯೆ ಬಗ್ಗೆ ಚರ್ಚಿಸಲು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಸ್ಥಿತಿಯಲ್ಲಿ ವಿಶೇಷ ಸಭೆ ಆಯೋಜಿಸಲಾಗಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಇಂದು ಸಂಜೆ 5 ಗಂಟೆಗೆ ಬೆಂಗಳೂರಿನ ವಿಧಾನಸೌಧದ 3ನೇ ಮಹಡಿ ಕೊಠಡಿ ಸಂಖ್ಯೆ-313ರಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ, ಗಣಿ ಮತ್ತು ಭೂ ವಿಜ್ಞಾನ ಸಚಿವರು ಎಸ್.ಎಸ್.ಮಲ್ಲಿಕಾರ್ಜುನ್, ಉಡುಪಿ ಜಿಲ್ಲೆಯ ಹಿರಿಯ ಅಧಿಕಾರಿಗಳು ಭಾಗವಹಿಸುವರು.






























































