ವಿಶ್ವಕಪ್‌ ಕ್ರಿಕೆಟ್‌ ಕೂಟ : ಇಂದು ಮೊದಲ ಪಂದ್ಯ

ಕಳೆದ ವಿಶ್ವಕಪ್ ಫೈನಲಿಸ್ಟ್​ ನ್ಯೂಜಿಲ್ಯಾಂಡ್-ಇಂಗ್ಲಂಡ್ ಮೊದಲ ಪಂದ್ಯದಲ್ಲಿ ಮುಖಾಮುಖಿ

ಅಹಮದಾಬಾದ್‌ : ವಿಶ್ವಕಪ್‌ ಕ್ರಿಕೆಟ್‌ ಕೂಟದ ಮೊದಲ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದ್ದು, ಇಡೀ ಕ್ರಿಕೆಟ್‌ ಜನಗತ್ತು ಕಾತರದಿಂದ ಈ ಪಂದ್ಯವನ್ನು ನಿರೀಕ್ಷಿಸುತ್ತದೆ. ಮೊದಲ ಪಂದ್ಯಕ್ಕೆ ಆತಿಥ್ಯ ವಹಿಸಲು ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನ ಸಜ್ಜಾಗಿದೆ. ಕಳೆದ ವಿಶ್ವಕಪ್​ನ ಫೈನಲಿಸ್ಟ್​ ತಂಡಗಳಾದ ನ್ಯೂಜಿಲ್ಯಾಂಡ್ ಮತ್ತು ಇಂಗ್ಲಂಡ್ ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.
ಇಂಗ್ಲೆಂಡ್ ಏಕದಿನ ಮತ್ತು ಟಿ-20 ಎರಡೂ ಮಾದರಿಯಲ್ಲೂ ಹಾಲಿ ಚಾಂಪಿಯನ್ ಆಗಿದೆ. ಹೀಗಾಗಿ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್‌ ತಂಡ ಗೆಲ್ಲುವ ಫೇವರಿಟ್ ಎನಿಸಿಕೊಂಡಿದೆ. ಇತ್ತ ಕಳೆದ ಬಾರಿಯ ಫೈನಲ್ ಸೋಲಿನ ಸೇಡು ತೀರಿಸಿಕೊಳ್ಳುವ ತವಕದಲ್ಲಿರುವ ಕಿವೀಸ್ ಕೂಡ ಬಲಿಷ್ಠ ಪಡೆಯನ್ನು ಕಟ್ಟಿಕೊಂಡು ಭಾರತಕ್ಕೆ ಬಂದಿಳಿದಿದೆ. ನ್ಯೂಜಿಲ್ಯಾಂಡ್‌ನ ನಾಯಕ ಕೇನ್ ವಿಲಿಯಮ್ಸನ್ ಮೊದಲ ಪಂದ್ಯದಲ್ಲಿ ಆಡದಿರುವುದು ತಂಡಕ್ಕೆ ಕೊಂಚ ಹಿನ್ನಡೆಯನ್ನುಂಟು ಮಾಡಿದೆ. ವಿಲಿಯಮ್ಸನ್ ಅನುಪಸ್ಥಿತಿಯಲ್ಲಿ ಟಾಮ್ ಲ್ಯಾಥಮ್ ತಂಡದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಇಂಗ್ಲೆಂಡ್ ತಂಡವನ್ನು ಜೋಸ್ ಬಟ್ಲರ್ ಮುನ್ನಡೆಸುತ್ತಿದ್ದಾರೆ.
ಪಂದ್ಯ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ. ಮಧ್ಯಾಹ್ನ 1.30ಕ್ಕೆ ಟಾಸ್‌ ನಡೆಯಲಿದೆ. ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವಿಶ್ವಕಪ್‌ ಪಂದ್ಯಗಳನ್ನು ನೋಡಬಹುದು. ಇದಲ್ಲದೆ, ಇದನ್ನು ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಮೊಬೈಲ್‌ನಲ್ಲಿ ಉಚಿತವಾಗಿ ವೀಕ್ಷಿಸಬಹುದಾಗಿದೆ.





























































































































error: Content is protected !!
Scroll to Top