ಏಷ್ಯನ್ ಗೇಮ್ಸ್‌ : ಹಾಲಿ ಚಾಂಪಿಯನ್‌ ಜಪಾನ್‌ ತಂಡವನ್ನು ಮಣಿಸಿ ಚಿನ್ನಕ್ಕೆ ಮುತ್ತಿಕ್ಕಿದ ಭಾರತ ಹಾಕಿ ತಂಡ

ಹ್ಯಾಂಗ್‌ಝೌ : ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಹಾಕಿ ತಂಡ, ಹಾಲಿ ಚಾಂಪಿಯನ್ ಜಪಾನ್ ತಂಡವನ್ನು 5-1 ಗೋಲುಗಳ ಅಂತರದಿಂದ ಮಣಿಸಿ ಐತಿಹಾಸಿಕ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದೆ. ಭಾರತದ ಪರ ಮನ್‌ಪ್ರೀತ್ ಸಿಂಗ್, ಹರ್ಮನ್‌ಪ್ರೀತ್ ಸಿಂಗ್, ಅಭಿಷೇಕ್ ಮತ್ತು ರೋಹಿದಾಸ್ ಅಮಿತ್ ಗೋಲು ಗಳಿಸುವ ಮೂಲಕ ಜಪಾನ್‌ ತಂಡವನ್ನು ಮಣಿಸುವಲ್ಲಿ ಪ್ರಮುಖ ಪಾತ್ರವಹಿಸಿದರು. ಇದಲ್ಲದೆ ಈ ಗೆಲುವಿನೊಂದಿಗೆ ಭಾರತ ಹಾಕಿ ತಂಡ 2024ರಲ್ಲಿ ನಡೆಯಲ್ಲಿರುವ ಪ್ಯಾರಿಷ್ ಒಲಿಂಪಿಕ್ಸ್‌ಗೆ ಅರ್ಹತೆಯನ್ನು ಸಹ ಖಚಿತಪಡಿಸಿಕೊಂಡಿದೆ.

ಫೈನಲ್ ಪಂದ್ಯಕ್ಕೂ ಮುನ್ನ ನಡೆದ ಪೂಲ್ ಎ ಪಂದ್ಯದಲ್ಲಿ ಜಪಾನ್ ತಂಡವನ್ನು 4-2 ಅಂತರದಿಂದ ಸೋಲಿಸಿದ್ದ ಭಾರತ, ಇದೀಗ ಫೈನಲ್‌ನಲ್ಲಿಯೂ ಅದೇ ರೀತಿಯ ಆಲ್‌ರೌಂಡರ್ ಪ್ರದರ್ಶನ ನೀಡಿದೆ. ಮೊದಲಾರ್ಧದಲ್ಲಿ ಜಪಾನ್ ಅದ್ಭುತ ಹೋರಾಟವನ್ನು ನೀಡಿತು. ಹೀಗಾಗಿ ಭಾರತಕ್ಕೆ ಹೆಚ್ಚು ಗೋಲು ದಾಖಲಿಸಲು ಸಾಧ್ಯವಾಗಲಿಲ್ಲ. ಆದರೆ ದ್ವಿತೀಯಾರ್ಧದಲ್ಲಿ ನಿಜವಾದ ಆಟ ಪ್ರದರ್ಶಿಸಿದ ಭಾರತ ಹಾಕಿ ತಂಡ ಬರೋಬ್ಬರಿ ನಾಲ್ಕು ಗೋಲು ಬಾರಿಸುವುದರೊಂದಿಗೆ ಪಂದ್ಯದಲ್ಲಿ ಸಂಪೂರ್ಣ ಪ್ರಾಬಲ್ಯ ಸಾಧಿಸಿತು.

































































error: Content is protected !!
Scroll to Top