ಕಾರ್ಕಳ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಜಂಟಿ ಆಶ್ರಯದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕ್ರೈಸ್ಟ್‌ಕಿಂಗ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಏಳನೇ ತರಗತಿಯ ವಿದ್ಯಾರ್ಥಿಗಳಾದ ಆಯುಶ್ರೀ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಹಾಗೂ ಲಕ್ಷಣ್ಯ ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆಯುವುದರ ಮೂಲಕ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅಥ್ಲೆಟಿಕ್ಸ್ : ಕ್ರೈಸ್ಟ್‌ಕಿಂಗ್‌ನ ಇಬ್ಬರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ






























































