ಕಾರ್ಕಳ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಹಾಗೂ ಪಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಅ. 5 ರಂದು ನಡೆದ ಪ್ರಾಥಮಿಕ ಶಾಲಾ ವಿಭಾಗದ ಬಾಲಕ ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಅಕ್ಷಯ ವಾಗ್ಲೆ (7ನೇ ತರಗತಿ)ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಮೂಲಕ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಕಾರ್ಕಳದ ರಾಜೇಂದ್ರ ವಾಗ್ಲೆ ಹಾಗೂ ಶಾಂಭವಿ ದಂಪತಿ ಪುತ್ರ.
ಸಾಧಕ ವಿದ್ಯಾರ್ಥಿಗೆ ಅಜೆಕಾರು ಪದ್ಮಗೋಪಾಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
ಗುಂಡು ಎಸೆತ : ಜ್ಞಾನಸುಧಾದ ಅಕ್ಷಯ ವಾಗ್ಲೆ ಜಿಲ್ಲಾ ಮಟ್ಟಕ್ಕೆ































