ಕಾರ್ಕಳ : ನಿಟ್ಟೆ ಲೆಮಿನಾ ಕ್ರಾಸ್ ಬಳಿ ಟೆಂಪೋವೊಂದು ಸ್ಕೂಟಿಗೆ ಡಿಕ್ಕಿಯಾದ ಘಟನೆ ಅ. 6ರಂದು ಸಂಭವಿಸಿದ್ದು, ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರ್ಕಳದಿಂದ ಪಡುಬಿದ್ರಿ ಸಾಗುತ್ತಿದ್ದ ಬಸ್ ಅನ್ನು ಓವರ್ ಟೇಕ್ ಮಾಡುವ ಭರದಲ್ಲಿ ಐಸ್ ಕ್ರೀಂ ಸಾಗಾಟದ ಲಾರಿ ಎದುರಿನಿಂದ ಬರುತ್ತಿದ್ದ ಸ್ಕೂಟಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟಿ ಸಹಿತ ಸವಾರ ರಸ್ತೆಗೆಸೆಯಲ್ಪಟ್ಟಿರುತ್ತಾರೆ. ಗಾಯಾಳಿಗೆ ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಕೂಟಿ ಸವಾರ ಸುಗಮ ಬಸ್ ಚಾಲಕ ಸುರೇಶ್ ಎಂದು ಗುರುತಿಸಲಾಗಿದೆ.
































