ಕಾರ್ಕಳ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಮಾಳ ಕೂಡಬೆಟ್ಟು ಸರಕಾರಿ ಪ್ರೌಢಶಾಲೆಯ ವತಿಯಿಂದ ಅ. 6 ಮತ್ತು 7 ರಂದು ಬಜಗೋಳಿಯಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಬೆಳ್ಮಣ್ ಸಂತ ಜೋಸೆಫರ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಶ್ರೀಶಾಂತ್ ಆಚಾರ್ಯ (10ನೇ ತರಗತಿ) 14ರ ವಯೋಮಾನದ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಹಾಗೂ ಶ್ರೇಯಸ್ ದೇವಾಡಿಗ (8ನೇ ತರಗತಿ) 14ರ ವಯೋಮಾನದ 100 ಮೀ. ಹಾಗೂ 200 ಮೀ. ಓಟದಲ್ಲಿ ಪ್ರಥಮ ಸ್ಥಾನ ಪಡೆದು ವೈಯಕ್ತಿಕ ಚಾಂಪಿಯನ್‌ಶಿಪ್‌ನೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಬೆಳ್ಮಣ್ ಸಂತ ಜೋಸೆಫರ ಶಾಲೆಯ ಇರ್ವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ

































































