ಕಾರ್ಕಳ : ಮುಡಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಾರಿ ಎಂಬಲ್ಲಿ ಕೊಬ್ಬರಿ ಒಣಗಿಸುವ ಕೊಠಡಿಯಲ್ಲಿ ಅ. 10 ರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು ನಾಲ್ಕು ಟನ್ ಕೊಬ್ಬರಿ ಬೆಂಕಿಗೆ ಆಹುತಿಯಾಗಿದೆ.
ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಬಿ. ಎಂ. ಸಂಜೀವ್, ಸಿಬ್ಬಂದಿ ಸುರೇಶ್, ಜಯ ಮೂಲ್ಯ, ಹಸನ್ ಸಾಬ್, ಸುಜಯ್, ವಿನಾಯಕ್ ಪಾಲ್ಗೊಂಡಿದ್ದರು.
ಕಡಾರಿ : ಕೊಬ್ಬರಿ ಒಣಗಿಸುವ ಕೊಠಡಿಯಲ್ಲಿ ಅಗ್ನಿ ಅವಘಡ


































