ಕಲ್ಯಾ ಪ್ರೌಢಶಾಲೆಯ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ

ಕಾರ್ಕಳ : ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ವತಿಯಿಂದ ಇತ್ತೀಚೆಗೆ ಬಜಗೋಳಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರೌಢಶಾಲೆ ವಿಭಾಗದ ವಿದ್ಯಾರ್ಥಿಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಲ್ಯಾ ಸರಕಾರಿ ಪ್ರೌಢಶಾಲೆ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳಾದ ಹಿತೇಶ್ (10ನೇ ತರಗತಿ) 800ಮೀ ಓಟ, ಟ್ರಿಪಲ್ ಜಂಪ್, ಹಾಗೂ 110 ಮೀ. ಹರ್ಡಲ್ಸ್ ಓಟದಲ್ಲಿ ಪ್ರಥಮ ಸ್ಥಾನ ಪಡೆದು ವೈಯಕ್ತಿಕ ಚಾಂಪಿಯನ್‌ಶಿಪ್‌ನೊಂದಿಗೆ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಚೈತ್ರಾ ಆಚಾರ್ಯ (10ನೇ ತರಗತಿ) ಎತ್ತರ ಜಿಗಿತದಲ್ಲಿ ಪ್ರಥಮ ಹಾಗೂ ರಿತೀಕ್ಷಾ (10ನೇ ತರಗತಿ) 100 ಮೀ ಹರ್ಡಲ್ಸ್‌ನಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇದೇ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳಾದ ಆದಿತ್ಯ 400 ಮೀ. ಓಟದಲ್ಲಿ ದ್ವಿತೀಯ, ಜಯಂತ್‌ ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ, ಶರಣ್ 1500 ಮೀ. ಓಟದಲ್ಲಿ, ಶ್ರೇಯಾ ಹಾಗೂ ಸಿಂಚನಾ ಎತ್ತರ ಜಿಗಿತದಲ್ಲಿ, ಪ್ರಜ್ವಲ್ ಗುಂಡು ಎಸೆತ ಮತ್ತು ಚಕ್ರ ಎಸೆತದಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ. ಈ ಮೂಲಕ ಶಾಲೆಗೆ ಒಟ್ಟು 12 ಪದಕ ಲಭಿಸಿದ್ದು, ಸಾಧಕ ವಿದ್ಯಾರ್ಥಿಗಳಿಗೆ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದ ಅಭಿನಂದಿಸಿದ್ದಾರೆ.



































































































error: Content is protected !!
Scroll to Top