ಕಾರ್ಕಳ : ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅ. 12 ರಂದು 2021-23ನೇ ಸಾಲಿನಲ್ಲಿ ಐಟಿಐ ಪಾಸಾದ ತರಬೇತುದಾರರಿಗೆ ಅಂಕಪಟ್ಟಿ ಹಾಗೂ ರಾಷ್ಟ್ರೀಯ ಪ್ರಮಾಣ ಪತ್ರ ವಿತರಣೆಯ ಘಟಿಕೋತ್ಸವ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಮುಖ್ಯ ಶಿಕ್ಷಕ ನಾಗರಾಜ್ ಮಾತನಾಡಿ, ಉತ್ತಮ ಜೀವನವನ್ನು ರೂಪಿಸಿಕೊಂಡಾಗ ಮಾತ್ರ ಪಡೆದ ವಿದ್ಯೆ ಸಾರ್ಥಕವಾಗುತ್ತದೆ ಎಂದರು. ಸಂಸ್ಥೆಯ ಕಚೇರಿ ಅಧೀಕ್ಷಕೆ ವನಿತಾ ಜೆ. ಶೆಟ್ಟಿ ಹಾಗೂ ಸಿಬ್ಬಂದಿ ವರ್ಗ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಿರಿಯ ತರಬೇತಿ ಅಧಿಕಾರಿ ಸಂತೋಷ್ ನಾಯಕ್ ಬಿ. ಕಾರ್ಯಕ್ರಮ ನಿರ್ವಹಿಸಿದರು.
ಕಾರ್ಕಳ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಘಟಿಕೋತ್ಸವ






























































