ತಾಲೂಕು ಮಟ್ಟದ ಕ್ರೀಡಾಕೂಟ – ಕುಚ್ಚೂರು ಪ್ರೌಢ ಶಾಲೆಗೆ ಸಮಗ್ರ ತಂಡ ಪ್ರಶಸ್ತಿ

ಹೆಬ್ರಿ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕೂಡುಬೆಟ್ಟು ಮಾಳ ಸರಕಾರಿ ಪ್ರೌಢ ಶಾಲೆಯ ವತಿಯಿಂದ ಬಜಗೋಳಿಯಲ್ಲಿ ಇತ್ತೀಚೆಗೆ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕುಚ್ಚೂರು ಹೆರ್ಗ ವಿಠಲ ಶೆಟ್ಟಿ ಸರಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳು 8 ಚಿನ್ನ, 11 ಬೆಳ್ಳಿ ಹಾಗೂ 13 ಕಂಚಿನ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಶಾಲೆ ತಾಲೂಕು ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಒಟ್ಟು 19 ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ವಿಜೇತ ವಿದ್ಯಾರ್ಥಿಗಳಿಗೆ ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕವೃಂದ ಹಾಗೂ ಶಾಲಾಭಿವೃದ್ಧಿ ಸಮಿತಿಯವರು ಅಭಿನಂದಿಸಿದ್ದಾರೆ.





























































































































error: Content is protected !!
Scroll to Top