ಕಾರ್ಕಳದಲ್ಲಿ ಚೀಟಿ ಎತ್ತಿ ಪಟಾಕಿ ಅಂಗಡಿ ತೆರೆಯಲು ಅನುಮತಿ

ಹಿಂದಿನ ಪದ್ಧತಿಯನ್ನೇ ಮುಂದುವರಿಸಲು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಸೂಚನೆ

ಉಡುಪಿ : ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಅಂಗಡಿಗಳನ್ನು ತೆರೆಯಲು ಕಾರ್ಕಳ ಹಾಗೂ ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಈ ಹಿಂದಿನಂತೆ ಸಮಿತಿಯನ್ನು ರಚಿಸಿ, ಚೀಟಿ ಎತ್ತುವ ಮೂಲಕ ಸ್ಥಳ ಹಂಚಿಕೆ ಮಾಡಬೇಕು ಎಂಬುದಾಗಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅಧಿಕಾರಿಗಳೀಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ದೀಪಾವಳಿ ಹಬ್ಬದ ಸಂದರ್ಭದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಳಿಗೆಗಳನ್ನು ತೆರೆಯಲು ಅನುಮತಿ ನೀಡುವ ಕುರಿತು ನಡೆದ ಸಭೆಯಲ್ಲಿ ಉಡುಪಿ ಜಿಲ್ಲೆ ವ್ಯಾಪ್ತಿಯಲ್ಲಿ ಪಟಾಕಿ ಅಂಗಡಿಗಳಿಗೆ ಷರತ್ತುಬದ್ಧ ಅನುಮತಿ ನೀಡಲು ನಿರ್ಧರಿಸಲಾಗಿದೆ.. ಸಾರ್ವಜನಿಕ ಸಂಚಾರ ವ್ಯವಸ್ಥೆಗೆ ಧಕ್ಕೆಯುಂಟಾಗದಂತೆ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು, ಸೂಕ್ತ ಸ್ಥಳವನ್ನು ಗುರುತಿಸಿ, ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚಿಸಿದರು.
ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯಲು ಅನುಮತಿ ನೀಡುವ ಮೊದಲು ನಿಯೋಜಿಸಲಾದ ಅಧಿಕಾರಿಗಳು ಮಳಿಗೆ ತೆರೆಯುವ ಪ್ರದೇಶಗಳನ್ನು ಖುದ್ದು ಪರಿಶೀಲನೆ ನಡೆಸಬೇಕು. ಅಂಗಡಿ ಮುಂಗಟ್ಟುಗಳ ಸಮೀಪದಲ್ಲಿ ಮತ್ತು ಜನನಿಬಿಡ ಪ್ರದೇಶಗಳಲ್ಲಿ ಸಂಚಾರ ವ್ಯವಸ್ಥೆಗೆ ಸಮಸ್ಯೆಯಾಗುವ ಪಟಾಕಿ ಮಳಿಗೆ ತೆರೆಯಲು ಅನುಮತಿ ನೀಡಬಾರದು ಎಂದರು.
ಪಟಾಕಿ ಅಂಗಡಿಗಳೀಗೆ ಅನುಮತಿ ಕೋರಿ ಅ.16ರ ಒಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಸಂಬಂಧಪಟ್ಟ ಇಲಾಖೆಗಳು ವರದಿಗಳನ್ನು ಶೀಘ್ರ ಪಡೆದು ಅರ್ಜಿಗಳನ್ನು ವಿಲೇವಾರಿ ಮಾಡುವಂತೆ ತಿಳಿಸಿದ್ದಾರೆ.





























































































































error: Content is protected !!
Scroll to Top