ಉಡುಪಿ : ಎರಡು ವರ್ಷದ ಹಿಂದೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ ನ್ಯಾಯಾಲಯ 30 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಬೈಂದೂರಿನ ಹೆರಂಜಾಲು ಗ್ರಾಮದ ಗಿರೀಶ್(24) ಎಂಬ ಯುವಕ 15 ವರ್ಷದ ಬಾಲಕಿಯನ್ನು ತನ್ನ ಚಿಕ್ಕಮ್ಮನ ಮನೆಯಲ್ಲಿ ಪರಿಚಯ ಮಾಡಿಕೊಂಡು ಪ್ರೀತಿಸುಸುವ ನಾಟಕವಾಡಿದ್ದ. 2021ರ ಆಗಸ್ಟ್‌ನಲ್ಲಿ ನಿರ್ಜನ ಪ್ರದೇಶಕ್ಕೆ ಬೈಕ್‌ನಲ್ಲಿ ಆಕೆಯನ್ನು ಕರೆದುಕೊಂಡು ಹೋಗಿ ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಮಾಡಿದ್ದಾನೆ. ಆಕೆಯ ದೇಹದ ಬದಲಾವಣೆಗಳನ್ನು ತಿಳಿದ ಆಕೆಯ ಚಿಕ್ಕಮ್ಮ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷಿಸಿದಾಗ ಆಕೆ ಗರ್ಭಿಣಿಯಾಗಿರುವುದು ತಿಳಿದುಬಂದಿದೆ.
ಬಾಲಕಿ ನೀಡಿದ ದೂರಿನಂತೆ ತನಿಖೆ ನಡೆಸಲಾಗಿದ್ದು, ಬಾಲಕಿ ಪೂರಕ ಸಾಕ್ಷಿ ನೀಡಿದ್ದಾಳೆ. ಸಾಕ್ಷಿ ಮತ್ತು ಡಿಎನ್‌ಎ ವರದಿ ಕೂಡ ಅಭಿಯೋಜನೆಗೆ ಪೂರಕವಾಗಿ ಸಾಕ್ಷಿ ನುಡಿದಿದ್ದರಿಂದ ಯುವಕನಿಗೆ 30 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ನ್ಯಾಯಾಲಯವು ಇಂದು ಆದೇಶಿಸಿದೆ.
ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಅಪರಾಧಿಗೆ 30 ವರ್ಷ ಜೈಲು









































