ದಕ್ಷಿಣ ವಲಯ ಜೂನಿಯರ್ ಅಥ್ಲೆಟಿಕ್‌ – ಗುಂಡು ಎಸೆತದಲ್ಲಿ ಅನುರಾಗ್‌ಗೆ ಚಿನ್ನದ ಪದಕ

ಕಾರ್ಕಳ : ತೆಲಂಗಾಣದ ವಾರಂಗಲ್‌ನಲ್ಲಿ ನಡೆದ ದಕ್ಷಿಣ ವಲಯ ಜೂನಿಯರ್ ಅಥ್ಲೆಟಿಕ್‌ ಚಾಂಪಿಯನ್‌ಶಿಪ್‌ನ ಗುಂಡು ಎಸೆತ ಸ್ಪರ್ಧೆಯಲ್ಲಿ ಉಡುಪಿಯ ಯುನೈಟೆಡ್ ಅಥ್ಲೆಟಿಕ್ಸ್‌ನ ಅನುರಾಗ್‌ ಜಿ. ಪ್ರಥಮ ಸ್ಥಾನ ಪಡೆದು ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಇವರು ಕಾರ್ಕಳ ಬಿಎಸ್‌ಎನ್‌ಎಲ್‌ ಉದ್ಯೋಗಿ ಗುರುರಾಜ್‌ ಮತ್ತು ಉಡುಪಿ ಜಿಲ್ಲಾ ಆಸ್ಪತ್ರೆಯ ನರ್ಸಿಂಗ್ ಅಧಿಕಾರಿ ರಮಣಿ ದಂಪತಿ ಪುತ್ರ. ಅಂತಾರಾಷ್ಟ್ರೀಯ ಕ್ರೀಡಾಪಟು ಶಾಲಿನಿ ರಾಜೇಶ್ ಶೆಟ್ಟಿ ಅವರಿಂದ ಕ್ರೀಡಾ ತರಬೇತಿ ಪಡೆಯುತ್ತಿದ್ದಾರೆ.















































































error: Content is protected !!
Scroll to Top