ರಾಜ್ಯ ಮಟ್ಟದ ಈಜು ಸ್ಪರ್ಧೆ : ಜ್ಞಾನಸುಧಾದ ಭೂಮಿ ತೃತೀಯ

ಕಾರ್ಕಳ : ಬೆಂಗಳೂರು ನಗರ ಗ್ರಾಮ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ, ಬೆಂಗಳೂರು ದಕ್ಷಿಣ ಜಿಲ್ಲೆ ಹಾಗೂ ಬಸವನಗುಡಿ ಅಕ್ವಾಟಿಕ್ ಸೆಂಟರ್ ಬಸವನಗುಡಿ ಬೆಂಗಳೂರು ಇವರ ಸಹಯೋಗದಲ್ಲಿ ಅ.17 ಮತ್ತು 18 ರಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ 14-17 ರ ವಯೋಮತಿಯ ಬಾಲಕ-ಬಾಲಕಿಯರ ರಾಜ್ಯಮಟ್ಟದ ಈಜು ಮತ್ತು ಡೈವಿಂಗ್‌ ಸ್ಪರ್ಧೆ ಬಸವನಗುಡಿ ಅಕ್ವಾಟಿಕ್ ಸೆಂಟರ್‌ನಲ್ಲಿ ಜರುಗಿತು.

ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಭೂಮಿ ಕೆ. (8ನೇ ತರಗತಿ) 200 ಮೀ. ವೈಯುಕ್ತಿಕ ಮಿಡ್ಲೆಯಲ್ಲಿ ಹಾಗೂ 200 ಮೀ. ಬಟರ್ ಫ್ಲೈಯಲ್ಲಿ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಇವರು ಕೆ. ವಿ. ಪ್ರವೀಣ್ ಹಾಗೂ ದೀಪ್ತಿ ಪ್ರಭು ದಂಪತಿ ಪುತ್ರಿ.
ಸಾಧಕ ವಿದ್ಯಾರ್ಥಿನಿಗೆ ಅಜೆಕಾರು ಪದ್ಮಗೋಪಾಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.















































































error: Content is protected !!
Scroll to Top