ಕಾರ್ಕಳ : ಬ್ರಹ್ಮಾವರ ಹಂಗಾರಕಟ್ಟೆ ಚೇತನ ಪ್ರೌಢಶಾಲೆಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಬಾಲಕಿಯರ ಕ್ರಿಕೆಟ್ ಪಂದ್ಯಾವಳಿಯಲ್ಲಿ (17ರೊಳಗಿನ ವಯೋಮಿತಿ) ಉಡುಪಿ ಜಿಲ್ಲಾ ತಂಡ ಪ್ರಥಮ ಸ್ಥಾನ ಪಡೆದಿದೆ. ತಂಡದಲ್ಲಿ ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರ್ಕಾರಿ ಪ್ರೌಢಶಾಲೆ ಪೆರ್ವಾಜೆ ಇಲ್ಲಿಯ ವಿದ್ಯಾರ್ಥಿನಿ ಸಮೃದ್ಧಿ ಭಾಗವಹಿಸಿದ್ದರು. ಈ ಮೂಲಕ ಚಿಕ್ಕೋಡಿಯಲ್ಲಿ ನಡೆಯುವ ರಾಜ್ಯಮಟ್ಟದ ಪಂದ್ಯಾಟಕ್ಕೆ ಇವರು ಆಯ್ಕೆಯಾಗಿದ್ದಾರೆ.
ಸಾಧಕ ವಿದ್ಯಾರ್ಥಿನಿಗೆ ಶಾಲಾಭಿವೃದ್ಧಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ, ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದ ಅಭಿನಂದಿಸಿದ್ದಾರೆ.








































