ಕಾರ್ಕಳ : ಪೆರ್ವಾಜೆಯಲ್ಲಿ ವ್ಯಕ್ತಿಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅ. 19ರ ಬೆಳಗ್ಗೆ ಬೆಳಕಿಗೆ ಬಂದಿದೆ. ಆಭರಣ ಮೋಟಾರ್ಸ್‌ನಲ್ಲಿ ಉದ್ಯೋಗಿಯಾಗಿದ್ದ ಪ್ರೀತಮ್ ಭಟ್ ಎಂಬವರೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮೃತ ಶರೀರ ಕೊಳೆತ ಸ್ಥಿತಿಯಲ್ಲಿದ್ದು, ಆತ್ಮಹತ್ಯೆ ಮಾಡಿಕೊಂಡು ಮೂರ್ನಾಲ್ಕು ದಿನಗಳು ಕಳೆದಿರಬಹುದು ಎನ್ನಲಾಗುತ್ತಿದೆ. ಕಾರ್ಕಳ ನಗರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಮೊದಲು ಒಂದು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ತಿಳಿದು ಬಂದಿದೆ. ಮೃತರು ತಂದೆ, ತಾಯಿ, ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.
ಪೆರ್ವಾಜೆ : ವ್ಯಕ್ತಿ ಆತ್ಮಹತ್ಯೆ


























