ಬಿಜೆಪಿ ಷಡ್ಯಂತ್ರಕ್ಕೆ ಕೋರ್ಟ್‌ನಲ್ಲೇ ಉತ್ತರಿಸುತ್ತೇನೆ – ಡಿಕೆಶಿ

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ನಡೆಸಲು ಹೈಕೋರ್ಟ್‌ ಅನುಮತಿ ನೀಡಿದ ಬೆನ್ನಲ್ಲೇ ಪ್ರಮುಖ ಪ್ರತಿಪಕ್ಷ ಬಿಜೆಪಿ ಮುಖಂಡರು ಶಿವಕುಮಾರ್ ರಾಜಿನಾಮೆಗೆ ಒತ್ತಾಯಿಸಿದ್ದಾರೆ.
ನನ್ನ ವಿರುದ್ದ ಬಿಜೆಪಿ ನಾಯಕರು ಏನೇ ಷಡ್ಯಂತ್ರ ಮಾಡಿದರೂ ನ್ಯಾಯಾಲಯದ ತೀರ್ಪು ಮತ್ತು ನನ್ನ ಆಸ್ತಿಯ ವಿವರ ಎಲ್ಲವೂ ಉತ್ತರ ನೀಡುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಅಕ್ರಮ ಆಸ್ತಿ ಗಳಿಕೆ ವಿಚಾರವಾಗಿ ಸಿಬಿಐ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿದ ಕುರಿತಂತೆ ಡಿ.ಕೆ. ಶಿವಕುಮಾರ್ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶೇ. 90 ರಷ್ಟು ತನಿಖೆ ಪೂರ್ಣಗೊಳಿಸಿದ್ದೇವೆ ಎಂದು ಸಿಬಿಐ ಹೇಳಿದೆ. ಆದರೆ, ನನ್ನದು ಹಾಗೂ ನನ್ನ ಕುಟುಂಬದವರ ಆಸ್ತಿ ಯಾವುದು ಎಂಬ ಬಗ್ಗೆ ವಿವರವನ್ನು ಸಿಬಿಐ ಹೇಳಬೇಕಿದೆ. ನನ್ನಿಂದ ಮಾಹಿತಿಯನ್ನೂ ಪಡೆದಿಲ್ಲ. ಹೀಗಿರುವಾಗ ಶೇ. 90ರಷ್ಟು ತನಿಖೆ ಹೇಗೆ ಪೂರ್ಣಗೊಂಡಿದೆ ಎಂಬುದು ನನಗೆ ಗೊತ್ತಿಲ್ಲ ಎಂದರು.

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರದಲ್ಲಿದ್ದಾಗ ದುರುದ್ದೇಶ ಪೂರ್ವಕವಾಗಿ, ರಾಜಕೀಯ ಉದ್ದೇಶದಿಂದ ನನ್ನ ವಿರುದ್ಧ ತನಿಖೆಗೆ ಆದೇಶ ನೀಡಿದರು. ಆದರೆ, ಸಿಬಿಐ ದಾಖಲಿಸಿರುವ ಎಫ್‌ಐಆರ್ ಸರಿಯಿಲ್ಲ ಎಂದು ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದೆ. ಈಗ ಹೈಕೋರ್ಟ್ ತನಿಖೆಗೆ ಆದೇಶಿಸಿದೆ. ನನಗೆ ನ್ಯಾಯಾಲಯದ ಮೇಲೆ ಗೌರವ, ನಂಬಿಕೆಯಿದೆ. ನನ್ನ ವಿರುದ್ಧ ಷಡ್ಯಂತ್ರಕ್ಕೆ ಸೂಕ್ತ ಸಂದರ್ಭದಲ್ಲಿ ಉತ್ತರ ನೀಡುತ್ತೇನೆ. ಎಲ್ಲದಕ್ಕೂ ಕಾನೂನು ಚೌಕಟ್ಟಿನಲ್ಲೇ ಹೋರಾಟ ಮಾಡುತ್ತೇನೆ ಎಂದು ಹೇಳಿದರು.

































































































































































error: Content is protected !!
Scroll to Top