ಅ. 21 : ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ

ಕಾರ್ಕಳ : ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ 2022-23ನೇ ಶೈಕ್ಷಣಿಕ ಸಾಲಿನ ಪದವಿ ಪ್ರದಾನ ಸಮಾರಂಭವು ಅ. 21ರಂದು ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ ನಡೆಯಲಿದೆ. ಬೆಳಗ್ಗಿನ ಕಾರ್ಯಕ್ರಮದಲ್ಲಿ ಶೈಕ್ಷಣಿಕ ಸಾಧನೆಗೈದ 26 ವಿದ್ಯಾರ್ಥಿಗಳಿಗೆ ಚಿನ್ನ ಮತ್ತು ಬೆಳ್ಳಿಯ ಪದಕ ನೀಡಿ ಗುರುತಿಸುವ ಹಾಗೂ ಎಂ.ಟೆಕ್ ಮತ್ತು ಎಂಸಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು.
ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವೈಸ್ ಚಾನ್ಸಲರ್ ಡಾ. ಎಸ್ ವಿದ್ಯಾಶಂಕರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿರುವರು. ನಿಟ್ಟೆ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಎನ್. ವಿನಯ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು. ಅಪರಾಹ್ನ ಗಂಟೆ 1:30 ರಿಂದ ಬಿ.ಇ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭವು ನಡೆಯಲಿದ್ದು ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯದ ಪ್ರೊ-ಚಾನ್ಸಲರ್ ಡಾ. ಶಾಂತರಾಮ್ ಶೆಟ್ಟಿ ಅಧ್ಯಕ್ಷತೆ ವಹಿಸಲಿರುವರು. ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯದ ವೈಸ್-ಚಾನ್ಸಲರ್ ಡಾ. ಎಂ.ಎಸ್. ಮೂಡಿತ್ತಾಯ ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು ಎಂದು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ನಿರಂಜನ್ ಎನ್. ಚಿಪ್ಳೂಣ್ಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

























































































































error: Content is protected !!
Scroll to Top