ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ, ರಾಮನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ರಾಮನಗರ ಜೈನ್ ಕ್ರೀಡಾಶಾಲೆಯ ಸಂಯುಕ್ತ ಆಶ್ರಯದಲ್ಲಿ ರಾಮನಗರ ಜೈನ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಹಿರಿಯ ಪ್ರಾಥಮಿಕ ವಿಭಾಗದ (14ರ ವಯೋಮಿತಿಯೊಳಗಿನ) ಬಾಲಕರ ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಇಬ್ಬರು ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಾಯನ್ ಮಿರಾಂದ (7ನೇ ತರಗತಿ) ಮತ್ತು ಅಶ್ವಿನ್ ಎ. ಶೆಟ್ಟಿ (6ನೇ ತರಗತಿ) ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು. ಇವರು ಪ್ರತಿನಿಧಿಸಿದ್ದ ಮೈಸೂರು ವಿಭಾಗ ಮಟ್ಟದ ಪ್ರಾಥಮಿಕ ವಿಭಾಗದ ಬಾಲಕರ ತಂಡ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಪಂದ್ಯಾಟದಲ್ಲಿ ರಾಯನ್ ಮಿರಾಂದ ನೇರವಾಗಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದರೆ, ಅಶ್ವಿನ್ ಎ. ಶೆಟ್ಟಿ ಮೀಸಲು ಆಟಗಾರನಾಗಿ ಆಯ್ಕೆಯಾಗಿದ್ದಾರೆ.
ಶಟಲ್ ಬ್ಯಾಡ್ಮಿಂಟನ್ – ಕ್ರೈಸ್ಟ್‌ಕಿಂಗ್‌ನ ಇಬ್ಬರು ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ







