ಕಾರ್ಕಳ ನಗರ ಪೊಲೀಸ್‌ ಠಾಣೆ ಹೆಡ್‌ಕಾನ್‌ಸ್ಟೆಬಲ್‌ ನಾಪತ್ತೆ

ಗುರುವಾರದಿಂದ ಕಾಣೆಯಾಗಿರುವ ಹೆಡ್‌ಕಾನ್‌ಸ್ಟೆಬಲ್‌ ಶೃತಿನ್‌ ಶೆಟ್ಟಿ

ಕಾರ್ಕಳ : ಕಾರ್ಕಳ ನಗರ ಪೊಲೀಸ್‌ ಠಾಣೆಯ ಹೆಡ್‌ಕಾನ್‌ಸ್ಟೆಬಲ್‌ ಶೃತಿನ್‌ ಶೆಟ್ಟಿ (35) ಕಾಣೆಯಾಗಿರುವ ಕುರಿತು ಅವರ ಪತ್ನಿ ದೂರು ದಾಖಲಿಸಿದ್ದಾರೆ.
ಕಾಪು ಜನಾರ್ದನ ದೇವಸ್ಥಾನ ಬಳಿಯಿರುವ ಅಂಗಡಿಮನೆ ನಿವಾಸಿಯಾಗಿರುವ ಶೃತಿನ್‌ ಶೆಟ್ಟಿ ಗುರುವಾರ ರಾತ್ರಿ 7.30ಕ್ಕೆ ಹೆಂಡತಿಗೆ ಫೋನ್‌ ಮಾಡಿ ನಾನು ನಂದಿಕೂರಿನಲ್ಲಿದ್ದು, ಮನೆಗೆ ಬರುತ್ತಿರುವುದಾಗಿ ಹೇಳಿದ್ದಾರೆ. ನಂತರ ಅವರ ಫೋನ್‌ ಸ್ವಿಚ್‌ ಆಫ್‌ ಆಗಿತ್ತು. ರಾತ್ರಿಯಿಡೀ ಮನೆಗೆ ಬಾರದಿರುವ ಹಿನ್ನೆಲೆಯಲ್ಲಿ ಗಾಬರಿಯಾಗಿರುವ ಪತ್ನಿ ಪೂಜಾ ಶೆಟ್ಟಿಯವರು ಶುಕ್ರವಾರ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ.
2008ರ ಬ್ಯಾಚಿನಲ್ಲಿ ಪೊಲೀಸ್‌ ಇಲಾಖೆಗೆ ಸೇರ್ಪಡೆಯಾಗಿದ್ದ ಶೃತಿನ್‌ ಶೆಟ್ಟಿ ಎರಡು ತಿಂಗಳ ಹಿಂದೆಯಷ್ಟೇ ಬಡ್ತಿಯಾಗಿ ಕಾರ್ಕಳ ನಗರ ಪೊಲೀಸ್‌ ಠಾಣೆಯ ಹೆಡ್‌ಕಾನ್‌ಸ್ಟೆಬಲ್‌ ಆಗಿ ಬಂದಿದ್ದರು. ಅ.17ರಂದು ಕರ್ತವ್ಯಕ್ಕೆ ಹಾಜರಾಗಿದ್ದರು. ಅ.18ಕ್ಕೆ ವಾರದ ರಜೆಯಿತ್ತು, 19ರಂದು ಸಿಎಲ್‌ ರಜೆ ಹಾಕಿದ್ದರು.
ದೃಢಕಾಯ, 178 ಸೆ. ಮೀ. ಎತ್ತರವಿರುವ ಶೃತಿನ್‌ ಶೆಟ್ಟಿಯವರನ್ನು ಯಾರಾದರೂ ಕಂಡರೆ 0820-2555452 ನಂಬರ್‌ ಸಂಪರ್ಕಿಸಲು ಕೋರಲಾಗಿದೆ. ಶೃತಿನ್‌ ಶೆಟ್ಟಿ ಇಂಗ್ಲಿಷ್‌, ಕನ್ನಡ, ತುಳು, ಹಿಂದಿ ಭಾಷೆ ಮಾತನಾಡುತ್ತಾರೆ.















error: Content is protected !!
Scroll to Top