ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಸರಾದಂದು ಮದ್ಯದಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ದಸರಾ ಮೆರವಣಿಗೆ ನಡೆಯಲ್ಲಿ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಅಹಿತಕರ ಘಟನೆ ನಡೆಸುವುದನ್ನು ತಡೆಯಲು ಹಾಗೂ ಕಾನೂನು ವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲೆಯಲ್ಲಿ ದಸರಾ ಮೆರವಣಿಗೆ ನಡೆಯುವ ದಿನದಂದು ಬಾರ್, ವೈನ್ ಶಾಪ್ ಮತ್ತು ಮದ್ಯದ ಅಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶಿಸಿದ್ದಾರೆ.
ಮೆರವಣಿಗೆ ಸಾಗುವ ಮಾರ್ಗದಲ್ಲಿ ಮತ್ತು ಆಸುಪಾಸಿನ ಸ್ಥಳಗಳಲ್ಲಿರುವ ಎಲ್ಲ ಮದ್ಯದ ಅಂಗಡಿ, ಬಾರ್, ವೈನ್‌ಶಾಪ್‍ಗಳನ್ನು ಕಡ್ಡಾಯವಾಗಿ ಮುಚ್ಚಲು ಆದೇಶಿಸಲಾಗಿದೆ. ಈ ಸಮಯದಲ್ಲಿ ಎಲ್ಲ ರೀತಿಯ ಅಮಲು ಪದಾರ್ಥಗಳ ಮಾರಾಟವನ್ನು ನಿಷೇಧಿಸಲಾಗಿದೆ.
ದಸರಾದಂದು ಮದ್ಯದಂಗಡಿ ಬಂದ್ : ಜಿಲ್ಲಾಧಿಕಾರಿ ಆದೇಶ







