ಕೈಲಾಸ ದರ್ಶನ ಮುಗಿಸಿ ವಾಪಸ್ಸಾಗುವ ವೇಳೆ ನಡೆದ ದುರಂತ
ಬೆಂಗಳೂರು : ನದಿಗೆ ಕಾರು ಉರುಳಿದ ಪರಿಣಾಮ ಕರ್ನಾಟಕದ ಇಬ್ಬರು ಸೇರಿ ಒಟ್ಟು 6 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಮಂಗಳವಾರ ಉತ್ತರಾಖಂಡದಲ್ಲಿ ನಡೆದಿದೆ. ಪಿಥೋರಗಢ ಜಿಲ್ಲೆಯ ಲಖನ್ಪುರ ಬಳಿ ಘಟನೆ ನಡೆದಿದೆ, ಚಾಲಕನ ನಿಯಂತ್ರಣ ತಪ್ಪಿ ಕಾರು ಕಾಳಿ ನದಿಗೆ ಬಿದ್ದ ಪರಿಣಾಮ ಬೆಂಗಳೂರಿನ ಇಬ್ಬರು, ತೆಲಂಗಾಣದ ಇಬ್ಬರು ಹಾಗೂ ಉತ್ತರಾಖಂಡದ ಇಬ್ಬರು ಸಾವನ್ನಪ್ಪಿದ್ದಾರೆ.
ಕೈಲಾಸ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಕತ್ತಲೆ ಮತ್ತು ಪ್ರತಿಕೂಲ ಭೌಗೋಳಿಕ ಪರಿಸ್ಥಿತಿಯಿಂದಾಗಿ ಮೃತದೇಹಗಳನ್ನು ಹೊರತೆಗೆಯುವ ಕೆಲಸವನ್ನು ಪ್ರಾರಂಭಿಸಲು ಸಾಧ್ಯವಾಗಲಿಲ್ಲ. ಬುಧವಾರ ಬೆಳಗ್ಗೆಯಿಂದ ಶೋಧ ಕಾರ್ಯ ಆರಂಭವಾಗಿದೆ ಎಂದು ಎಸ್ಪಿ ಹೇಳಿದರು.



































