ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಗುಜರಿ ಮಾರಾಟದಲ್ಲಿ ಅವ್ಯವಹಾರ

ತನಿಖೆಗೆ ನ್ಯಾಯಾಲಯ ಆದೇಶ

ಉಡುಪಿ : ಬ್ರಹ್ಮಾವರದ ಸಕ್ಕರೆ ಕಾರ್ಖಾನೆಯ ಗುಜರಿ ಮಾರಾಟದಲ್ಲಿ ಬೃಹತ್‌ ಭ್ರಷ್ಟಾಚಾರ ನಡೆದಿರುವ ಆರೋಪ ಕೇಳಿಬಂದಿದ್ದು, ಈ ಕುರಿತು ತನಖೆ ನಡೆಸಲು ನ್ಯಾಯಾಲಯ ಆದೇಶಿಸಿದೆ.
ಅವಿಭಜಿತ ಉಡುಪಿ ಮತ್ತು ದ.ಕ ಜಿಲ್ಲೆಯ ಏಕೈಕ ಸಹಕಾರಿ ಸಕ್ಕರೆ ಕಾರ್ಖಾನೆಯ ಗುಜರಿ ಮಾರಾಟದಲ್ಲಿ 14 ಕೋಟಿಗೂ ಮಿಕ್ಕಿ ವಂಚನೆ ಮಾಡಿರುವ ಬಿಜೆಪಿ ಬೆಂಬಲಿತ ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ವಿರುದ್ಧ ತನಿಖೆ ನೆಡೆಸುವಂತೆ ಉಡುಪಿ ಜಿಲ್ಲಾ ರೈತ ಸಂಘ ಖಾಸಗಿ ದೂರನ್ನು ಆಡಿಷಲ್ ಸಿವಿಲ್ ಜಡ್ಜ್ ಉಡುಪಿಯಲ್ಲಿ ದಾಖಲು ಮಾಡಿದೆ.
ಈ ದೂರನ್ನು ವಿಚಾರಣೆ ನಡೆಸಿದ ನ್ಯಾಯಧೀಶರು ಬೃಹತ್ ವಂಚನೆ ಕುರಿತು ಸೂಕ್ತ ತನಿಖೆ ಮಾಡಿ ಡಿಸೆಂಬರ್ 12ರ ಒಳಗೆ ನ್ಯಾಯಾಲಯಕ್ಕೆ ವರದಿ ನೀಡಲು ಬ್ರಹ್ಮವಾರ ಪೊಲೀಸ್ ಠಾಣೆಗೆ ಆದೇಶ ಮಾಡಿದ್ದಾರೆ.
ಇತ್ತೀಚಿಗೆ ಬ್ರಹ್ಮಾವರದಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಮತ್ತು ರೈತ ಸಂಘಟನೆಯ ಬೃಹತ್ ಮಟ್ಟದ ಪ್ರತಿಭಟನೆ ನಡೆಸಿತ್ತು.
ಕಾಂಗ್ರೆಸ್ ಮುಖಂಡ ಕರಾವಳಿ ಮಲೆನಾಡು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುಧೀರ್ ಕುಮಾರ್ ಮುರೊಳ್ಳಿ ತನಿಖೆ ನಡೆಸಲು ಆಗ್ರಹಿಸಿದ್ದರು.































































































































error: Content is protected !!
Scroll to Top