ಕುಡಿದ ಮತ್ತಿನಲ್ಲಿ ಸಾರ್ವಜನಿಕರೊಂದಿಗೆ ಗಲಾಟೆ
ತಿರುವನಂತಪುರ : ರಜನಿಕಾಂತ್ ಅಭಿನಯದ ಜೈಲರ್ ಚಿತ್ರದ ವಿಲನ್ ವಿನಾಯಕನ್ ಅವರನ್ನು ಕೇರಳದ ಪೊಲೀಸರು ಕುಡಿದ ಮತ್ತಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ಮಾಡಿದ ಆರೋಪದಲ್ಲಿ ಬಂಧಿಸಿದ್ದಾರೆ.
ವಿನಾಯಕನ್ ನಿನ್ನೆ ಅಮಲಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸಿದ್ದಾರೆ ಮತ್ತು ಪೊಲೀಸ್ ಠಾಣೆಯಲ್ಲೂ ಗಲಾಟೆ ಮಾಡಿದ್ದಾರೆ. ಪೊಲೀಸರು ಅವರನ್ನು ವೈದ್ಯಕೀಯ ಪರೀಕ್ಷಗೊಳಪಡಿಸಿದ್ದಾರೆ.
ತಾನು ವಾಸವಾಗಿರುವ ಅಪಾರ್ಟ್ಮೆಂಟ್ ನಿವಾಸಿಗಳ ಜತೆ ವಿನಾಯಕನ್ ಕುಡಿದು ಗಲಾಟೆ ಮಾಡಿದ್ದಾರೆ ಎಂದು ದೂರು ಬಂದಿತ್ತು. ಪೊಲೀಸರು ವಿನಾಯಕನ್ರನ್ನು ಠಾಣೆಗೆ ಕರೆದುಕೊಂಡು ಹೋದಾಗ ಅಲ್ಲೂ ಗಲಾಟೆ ಮಾಡಿದ್ದಾರೆ. ವೈದ್ಯಕೀಯ ಪರೀಕ್ಷೆ ಬಳಿಕ ಪೊಲೀಸರು ವಿನಾಯಕನ್ ಅವರನ್ನು ಜಾಮೀನಿನಲ್ಲಿ ಬಿಡುಗಡಗೊಳಿಸಿದ್ದಾರೆ.































































