ಕಾರ್ಕಳ : ಇರ್ವತ್ತೂರು ಬಗಲ್ತಕಟ್ಟೆ ಶಾಲೆಯ ಸುವರ್ಣ ಮಹೋತ್ಸವದ ಸಲುವಾಗಿ ಅ. 27 ರಂದು ಸುವರ್ಣ ಮಹೋತ್ಸವ ಸಮಿತಿ ವತಿಯಿಂದ ಮನವಿ ಪತ್ರ ಬಿಡುಗಡೆಗೊಳಿಸಲಾಯಿತು.
2023 ಡಿಸೆಂಬರ್ 14ಕ್ಕೆ ಶಾಲೆ ಪ್ರಾರಂಭವಾಗಿ 50 ವರ್ಷ ಪೂರ್ಣವಾಗುತ್ತದೆ. ಅಂದೇ ಶಾಲೆಯಲ್ಲಿ ಸುವರ್ಣ ಮಹೋತ್ಸವ ಆಚರಿಸುವುದರ ಜೊತೆಗೆ, ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಶಿಕ್ಷಣ ಸಿಗಬೇಕು ಎನ್ನುವ ದೃಷ್ಟಿಯಿಂದ ಶಾಲೆಗೆ ಅಗತ್ಯವಿರುವ ವ್ಯವಸ್ಥೆಯನ್ನು ಮಾಡುವ ಸಲುವಾಗಿ ಇಂದು ಸಮಿತಿಯ ಗೌರವಾಧ್ಯಕ್ಷ ಭಾಸ್ಕರ್ ಎಸ್. ಕೋಟ್ಯಾನ್ ಅವರು ಮನವಿ ಪತ್ರ ಬಿಡುಗಡೆ ಮಾಡಿದರು.
ಈ ಸಂದರ್ಭ ಸಮಿತಿಯ ಅಧ್ಯಕ್ಷ ಭರತ್ ಕುಮಾರ್ ಜೈನ್, ಪದಾಧಿಕಾರಿಗಳಾದ ಭುಜಂಗ ಶೆಟ್ಟಿ, ಶೇಖರ್ ಅಂಚನ್, ಹರೀಶ್ ಬಂಗೇರ, ಶ್ರೀಹರಿ ಭಟ್, ರವಿರಾಜ್ ಪೂಜಾರಿ, ಸಂತೋಷ್, ಎಸ್.ಡಿ.ಎಂ.ಸಿ ಅಧ್ಯಕ್ಷ ಉಮೇಶ್ ಪೂಜಾರಿ, ಶಾಲಾ ಮುಖ್ಯ ಶಿಕ್ಷಕ ನಾಗೇಶ್ ಪೂಜಾರಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಕೋಟ್ಯಾನ್, ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ ಸದಸ್ಯರಯ, ಪೋಷಕರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಉಪಸ್ಥಿತರಿದ್ದರು.






























































