ಸಿದ್ದರಾಮಯ್ಯ ಅವಹೇಳನ : ಶಾಸಕ ಪೂಂಜಾ ವಿರುದ್ಧ ಕೇಸ್‌

ಕಲೆಕ್ಷನ್‌ ಮಾಸ್ಟರ್‌ ಎಂದು ಪೋಸ್ಟ್‌ ಹಂಚಿಕೆ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಲೆಕ್ಷನ್‌ ಮಾಸ್ಟರ್‌ ಎಂದು ಅವಹೇಳನ ಮಾಡಿ ಪೋಸ್ಟ್ ಹಾಕಿದ್ದ ಆರೋಪದ ಮೇಲೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಳ್ತಂಗಡಿ ಪೊಲೀಸರು ಮತ್ತೊಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶಾಸಕರ ವಿರುದ್ಧ ಐಪಿಸಿ ಸೆಕ್ಷನ್ 504 (ಉದ್ದೇಶಪೂರ್ವಕವಾಗಿ ಯಾರನ್ನಾದರೂ ಅವಮಾನಿಸುವುದಕ್ಕೆ ಶಿಕ್ಷೆ) ಮತ್ತು 505 (2) (ವರ್ಗಗಳ ನಡುವೆ ದ್ವೇಷ ಸೃಷ್ಟಿಸುವುದು) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
ಶಾಸಕ ಹರೀಶ್ ಪೂಂಜಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿ ಮತ್ತು ಅವರ ಅಧಿಕೃತ ನಿವಾಸದ ಚಿತ್ರಗಳನ್ನು ಹಂಚಿಕೊಂಡು ಎರಡಕ್ಕೂ `ಕಲೆಕ್ಷನ್ ಮಾಸ್ಟರ್ (ಸಿಎಂ) ಕರ್ನಾಟಕ’ ಎಂಬ ಶೀರ್ಷಿಕೆ ನೀಡಿದ್ದರು.
ಸರ್ಕಾರಕ್ಕೆ ಉದ್ದೇಶಪೂರ್ವಕವಾಗಿ ಮಾನಹಾನಿ ಮಾಡಲು ಮತ್ತು ಅವಮಾನಿಸಲು ಶಾಸಕರು ಚಿತ್ರಗಳನ್ನು ಅಪ್‌ಲೋಡ್ ಮಾಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶೇಖರ್ ಕುಕ್ಕೇಡಿ ಬೆಳ್ತಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.





























































































































error: Content is protected !!
Scroll to Top