ಪ್ರವೀಣ್‌ ನೆಟ್ಟಾರು ಹತ್ಯೆ : ಒಂದು ವರ್ಷ ಕಳೆದರೂ ಬಲೆಗೆ ಬೀಳದ ಪ್ರಮುಖ ಆರೋಪಿಗಳು

ಆರೋಪಿಗಳ ಸುಳಿವಿಗೆ 2 ಲ.ರೂ. ಬಹುಮಾನ

ಸುಳ್ಯ: ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮೂವರು ಆರೋಪಿಗಳ ಪತ್ತೆಗೆ ಎನ್ಐಎ ಮತ್ತೊಮ್ಮೆ ನಗದು ಬಹುಮಾನ ಘೋಷಿಸಿದೆ.
ಆರೋಪಿಗಳಾದ ನೌಷದ್, ಅಬ್ದುಲ್ ನಾಸೀರ್ ಮತ್ತು ಅಬ್ದುಲ್ ರಹಮಾನ್ ಸುಳಿವು ನೀಡಿದವರಿಗೆ ತಲಾ 2 ಲಕ್ಷ ನಗದು ಬಹುಮಾನವನ್ನು ಎನ್ಐಎ ಘೋಷಿಸಿದೆ.
ಈ ಮೂವರು ಆರೋಪಿಗಳು ನಿಷೇಧಿತ ಪಿಎಫ್ಐ ಸಂಘಟನೆಯ ಕಾರ್ಯಕರ್ತರಾಗಿದ್ದು ಈ ಹಿಂದೆ ಎನ್ಐಎ ಅಧಿಕಾರಿಗಳು ನೌಷಾದ್ ಮನೆ ಮೇಲೆ ದಾಳಿ ನಡೆಸಿ ಶರಣಾಗುವಂತೆ ನೋಟಿಸ್ ನೀಡಿದ್ದರು.
2022ರ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಅವರ ಕೋಳಿ ಅಂಗಡಿ ಬಳಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಎನ್ಐಎ ಹಲವು ಆರೋಪಿಗಳನ್ನು ಬಂಧಿಸಿದೆ.



























































































































error: Content is protected !!
Scroll to Top