ಸುಳ್ಯ : ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದಲ್ಲಿ ಒಣಗಿದ ಅಡಿಕೆ ರಾಶಿ ಮಧ್ಯೆ ಯುವಕನ ಅರೆಬೆಂದ ಸ್ಥಿತಿಯಲ್ಲಿದ್ದ ಮೃತದೇಹ ನಿನ್ನೆ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಆಚಳ್ಳಿ ನಿವಾಸಿ ಸಿರಿಯಾಕ್ ಮ್ಯಾಥ್ಯೂ ಎಂಬವರ ಪುತ್ರ ಸೈಬಿನ್ ಎಂದು ಗುರುತಿಸಲಾಗಿದೆ.
ಮೃತದೇಹ ಅರೆಬೆಂದ ಸ್ಥಿತಿಯಲ್ಲಿ ಮನೆಯ ಕೊಟ್ಟಿಗೆಯಲ್ಲಿತ್ತು. ಯುವಕ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಏನ್ನಲಾಗಿದೆ. ಆದರೆ ಸಾವಿನ ನಿಖರ ಕಾರಣ ಇನ್ನಷ್ಟೆ ತಿಳಿದು ಬರಬೇಕಿದೆ. ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಅಡಿಕೆ ರಾಶಿಯಲ್ಲಿ ಯುವಕನ ಮೃತದೇಹ ಪತ್ತೆ






























































