ಎಕ್ಸಲೆಂಟ್‌ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ

ಕನ್ನಡ ಎಂದರೆ ಕೇವಲ ಭಾಷೆಯಲ್ಲ ಕನ್ನಡಿಗರ ಬದುಕು – ರಶ್ಮಿತಾ ಜೈನ್

ಮೂಡುಬಿದಿರೆ : ಕನ್ನಡವೆಂದರೆ ಬರಿಯ ಭಾಷೆಯಲ್ಲ ಅದು ಕನ್ನಡಿಗರ ಬದುಕು. ಕನ್ನಡ ನಾಡು ನುಡಿಯ ಬಗ್ಗೆ ಗೌರವ ಇಟ್ಟುಕೊಳ್ಳುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯ. ಕನ್ನಡಿಗರು ಮೊದಲು ಕನ್ನಡದವರಾಗಬೇಕು ಎಂದು ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ವಿದ್ಯಾರ್ಥಿಗಳಿಗೆ ಕಿವಿ ಮಾತನ್ನು ಹೇಳಿದರು.

ಅವರು ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನಲ್ಲಿ ನಡೆದ “ಕರ್ನಾಟಕ ಸಂಭ್ರಮ -50” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ ಮಾತನಾಡಿ, ಕರ್ನಾಟಕ ಹಲವು ಭಾಷೆಗಳ ಸಂಗಮ. ವ್ಯವಹಾರಿಕವಾಗಿ ನಾವು ಬೇರೆ ಭಾಷೆಗಳನ್ನು ಒಪ್ಪಿಕೊಂಡಿದ್ದರೂ ಕನ್ನಡಕ್ಕೆ ನಮ್ಮ ಹೃದಯದಲ್ಲಿ ಸ್ಥಾನ ಕೊಡಬೇಕು ಎಂದರು.

ಸುವರ್ಣ ಸಂಭ್ರಮದ ನೆನಪಿಗಾಗಿ ಸಂಸ್ಥೆಯಲ್ಲಿ ಸ್ವಚ್ಛ ಭಾಷಾ ಅಭಿಯಾನ ಪ್ರಾರಂಭಿಸಲಾಯಿತು. ಬಳಿಕ ವಿದ್ಯಾರ್ಥಿಗಳಿಂದ ಕನ್ನಡ ಗೀತ ಗಾಯನ ನಡೆಯಿತು. ಪ್ರೌಢಶಾಲಾ ಮುಖ್ಯ ಶಿಕ್ಷಕ ಶಿವಪ್ರಸಾದ್ ಭಟ್ ಉಪಸ್ಥಿತರಿದ್ದರು. ಉಪನ್ಯಾಸಕ ಡಾ. ವಾದಿರಾಜ ಕಲ್ಲೂರಾಯ ಕಾರ್ಯಕ್ರಮ ನಿರ್ವಹಿಸಿದರು.









































































































error: Content is protected !!
Scroll to Top