ಕಾರ್ಕಳ ರೋಟರಿ ಆಸ್ಪತ್ರೆಯಲ್ಲಿ ಡಾ. ಶರತ್ ಕುಮಾರ್ ರಾವ್ ಲಭ್ಯ

ಕಾರ್ಕಳ : ಕಾರ್ಕಳದ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯು ತನ್ನ ಹೆಸರಾಂತ ಆರೋಗ್ಯ ತಜ್ಞರ ಸಮಿತಿಗೆ ಹೊಸ ತಜ್ಞರ ಸೇರ್ಪಡೆಯನ್ನು ಪ್ರಕಟಿಸಿದೆ. ನ. 9ರಂದು ತಿಂಗಳ ಪ್ರತಿ ಗುರುವಾರ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಎಲುಬುಕೀಲು ವಿಭಾಗದ ಪ್ರಾಧ್ಯಾಪಕ ಡಾ. ಶರತ್ ಕುಮಾರ್ ರಾವ್ ಅವರು ಕಾರ್ಕಳದ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ಸಮಾಲೋಚನೆಗಾಗಿ ಲಭ್ಯವಿರುತ್ತಾರೆ. ಅವರು ಮೂಳೆ ಮತ್ತು ಕೀಲು ಬದಲಿ ಜೋಡಣೆ ಮತ್ತಿತರ ಮೂಳೆಗೆ ಸಂಬಂಧಿತ ಶಸ್ತ್ರ ಚಿಕಿತ್ಸೆ ಮಾಹಿತಿ ನೀಡಲಿದ್ದಾರೆ.

ಡಾ. ಶರತ್ ಕುಮಾರ್ ರಾವ್ ಅವರ ಭೇಟಿಯಿಂದ ಕಾರ್ಕಳದ ರೋಗಿಗಳಿಗೆ ಸಕಾಲದಲ್ಲಿ ರೋಗದ ಕುರಿತು ಮಾಹಿತಿ ನೀಡಿ ಉತ್ತಮ ಗುಣಮಟ್ಟದ ವೈದ್ಯಕೀಯ ಆರೈಕೆ ನೀಡಲು ಇನ್ನಷ್ಟು ಸಹಕಾರಿಯಾಗಲಿದೆ. ಇವರು ಪ್ರತಿ ಗುರುವಾರ ಸಂಜೆ 5 ರಿಂದ 6:30 ರವರೆಗೆ ಸಮಾಲೋಚನೆಗೆ ಲಭ್ಯವಿರುತ್ತಾರೆ ಎಂದು ಡಾ.ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಕೀರ್ತಿನಾಥ ಬಲ್ಲಾಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9731601150 ಅಥವಾ 08258 230583 ಅನ್ನು ಸಂಪರ್ಕಿಸಬಹುದಾಗಿದೆ.

















































error: Content is protected !!
Scroll to Top