ಕಾರ್ಕಳ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಕೆ.ಎಂ.ಇ.ಎಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಇಂಗ್ಲೀಷ್ ಕಂಠಪಾಠ ಸ್ಪರ್ಧೆಯಲ್ಲಿ ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿನಿ ಕೆಟ್ಲಿನ್ ಏಂಜಲ್ ಪಿಂಟೋ (4ನೇ ತರಗತಿ) ಪ್ರಥಮ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳಾದ ಮೊಹಮ್ಮದ್ ಇಶಾನ್ ಧಾರ್ಮಿಕ ಪಠಣ ಅರೇಬಿಕ್ ದ್ವಿತೀಯ ಹಾಗೂ ಅನುಷಾ ಕ್ಲೇ ಮಾಡೆಲಿಂಗ್‌ನಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಪ್ರತಿಭಾ ಕಾರಂಜಿ – ಇಂಗ್ಲೀಷ್ ಕಂಠಪಾಠ ಸ್ಪರ್ಧೆ : ಕ್ರೈಸ್ಟ್‌ಕಿಂಗ್‌ನ ವಿದ್ಯಾರ್ಥಿನಿ ಕೆಟ್ಲಿನ್ ಜಿಲ್ಲಾ ಮಟ್ಟಕ್ಕೆ






































































