ಕಾರ್ಕಳ : ನಂದಳಿಕೆ ಗ್ರಾಮದ ಮಾವಿನಕಟ್ಟೆಯ ದೀಪಾ (21) ಎಂಬಾಕೆ ಕಾಣೆಯಾಗಿರುವ ಪ್ರಕರಣ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಈಕೆ ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ತೃತೀಯ ವರ್ಷದ ಬಿ.ಎ. ವಿದ್ಯಾಭ್ಯಾಸ ಮಾಡುತ್ತಿದ್ದು, ನ. 6 ರಂದು ಬೆಳಿಗ್ಗೆ ಕಾಲೇಜಿಗೆ ಹೋಗಿ ಬರುವುದಾಗಿ ಮನೆಯಿಂದ ಹೋಗಿದ್ದು, ಕಾಲೇಜಿಗೂ ಹೋಗದೆ ವಾಪಾಸು ಮನೆಗೂ ಬಾರದೇ, ಸಂಬಂಧಿಕರ ಮನೆಗೂ ಹೋಗದೆ ಕಾಣೆಯಾಗಿದ್ದಾರೆ ಎಂದು ಅಣ್ಣ ದಿಲೀಪ್ ಪೂಜಾರಿ ನೀಡಿದ ಮಾಹಿತಿಯಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ನಂದಳಿಕೆ : ಯುವತಿ ನಾಪತ್ತೆ














































































