ಮಂಗಳೂರು-ಬೆಂಗಳೂರು ಮಾರ್ಗದಲ್ಲಿ ವಂದೇ ಭಾರತ್‌ ರೈಲು

ಮಂಗಳೂರು : ಬೆಂಗಳೂರು-ಮಂಗಳೂರು ನಡುವೆ ಶೀಘ್ರ ವಂದೇ ಭಾರತ್‌ ರೈಲು ಪ್ರಾರಂಭವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಹೇಳಿದ್ದಾರೆ.
ವಂದೇ ಭಾರತ್‌ ರೈಲನ್ನು ಕರಾವಳಿ ಭಾಗಕ್ಕೆ ವಿಸ್ತರಿಬೇಕೆನ್ನುವುದು ಈ ಭಾಗದ ಜನರ ಬಹುಕಾಲದ ಬೇಡಿಕೆ. ಈ ಬಗ್ಗೆ ಕೇಂದ್ರ ಸರಕಾರದಿಂದ ಸಕಾರಾತ್ಮಕ ಸ್ಪಂದನೆ ದೊರಕಿದೆ ಎಂದು ಕಟೀಲ್ ಟ್ವೀಟ್‌ ಮಾಡಿದ್ದಾರೆ.

ಮಂಗಳೂರು- ಮಡಗಾಂವ್‌ ವಂದೇ ಭಾರತ್ ರೈಲು ಓಡಾಟಕ್ಕೆ ಸರ್ವಸನ್ನದ್ಧವಾಗಿದ್ದು, ವೇಳಾಪಟ್ಟಿ ಯಾವುದೇ ಕ್ಷಣದಲ್ಲಿಯೂ ಬಿಡುಗಡೆಯಾಗಲಿದೆ. ಇನ್ನು ಮಂಗಳೂರು-ಬೆಂಗಳೂರು ವಂದೇ ಭಾರತ್ ರೈಲಿಗಾಗಿ ಮಾಡಿದ ಮನವಿ ಫಲಪ್ರದವಾಗಿದ್ದು, ಶೀಘ್ರದಲ್ಲಿ ಅದು ಕೂಡ ಈಡೇರಲಿದೆ. ಈ ಸಿಹಿಸುದ್ದಿಗಾಗಿ ಜಿಲ್ಲೆಯ ನಾಗರಿಕರ ಪರವಾಗಿ ಕೇಂದ್ರ ಸರಕಾರಕ್ಕೆ ಧನ್ಯವಾದಗಳು ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಕಾಸರಗೋಡು-ತಿರುವನಂತಪುರಂ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಮಂಗಳೂರಿನ ತನಕ ವಿಸ್ತರಣೆ ಮಾಡಲು ಒತ್ತಾಯ ಕೇಳಿಬಂದಿತ್ತು. ರೈಲ್ವೆ ಇಲಾಖೆಯ ಮುಂದೆ ಮಂಗಳೂರು-ಮಡಗಾಂವ್, ಮಂಗಳೂರು-ಎರ್ನಾಕುಳಂ ನಡುವೆ ವಂದೇ ಭಾರತ್ ರೈಲು ಸಂಚಾರ ನಡೆಸುವ ಪ್ರಸ್ತಾವನೆ ಇತ್ತು. ಆದರೆ ಈಗ ಸಂಸದರು ಮಾಡಿರುವ ಟ್ವೀಟ್ ಅನ್ವಯ ಮಡಗಾಂವ್-ಮಂಗಳೂರು ನಡುವೆ ಹೊಸ ವಂದೇ ಭಾರತ್ ರೈಲು ಸಂಚಾರ ಶೀಘ್ರವೇ ಆರಂಭವಾಗಲಿದೆ. ಜತೆಗೆ ಮಂಗಳೂರು-ಬೆಂಗಳೂರು ನಡುವೆ ವಂದೇ ಭಾರತ್ ರೈಲು ಓಡಿಸಬೇಕು ಎಂಬ ಕರಾವಳಿ ಭಾಗದ ಜನರು ಬೇಡಿಕೆಯೂ ಈಡೇರಲಿದೆ.

































































































































































error: Content is protected !!
Scroll to Top