ಪ್ರತಿಪಕ್ಷ ನಾಯಕ ಆರ್. ಅಶೋಕ : ಒಕ್ಕಲಿಗ ನಾಯಕನಿಗೆ ಮಣೆ ಹಾಕಿದ ಬಿಜೆಪಿ ಹೈಕಮಾಂಡ್

ಬೆಂಗಳೂರು : ವಿಪಕ್ಷ ನಾಯಕರಾಗಿ ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್ ಅವರ ಅನುಭವಕ್ಕೆ ಬಿಜೆಪಿ ಹೈಕಮಾಂಡ್ ಮಣೆ ಹಾಕಿದೆ. ಒಕ್ಕಲಿಗ ಸಮುದಾಯದ ಬಲಿಷ್ಠ ನಾಯಕರಾದ ಅಶೋಕ್ ವಿಪಕ್ಷ ನಾಯಕರಾಗಿ ಸದನದಲ್ಲಿ ಪಕ್ಷವನ್ನು ಮುನ್ನಡೆಸಲಿದ್ದಾರೆ. ಮಾಜಿ ಉಪ ಮುಖ್ಯಮಂತ್ರಿ, ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಶಾಸಕ ಆರ್.​ ಅಶೋಕ ಅವರಿಗೆ ಪ್ರತಿಪಕ್ಷ ನಾಯಕನ ಜವಾಬ್ದಾರಿ ವಹಿಸಲಾಗಿದೆ. ಬೆಂಗಳೂರಿನ ಐಟಿಸಿ ಹೋಟೆಲ್​ನಲ್ಲಿ ನ.17 ರಂದು ಸಂಜೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಕಳೆದ ವಾರವಷ್ಟೇ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಬಿ.ವೈ. ವಿಜಯೇಂದ್ರ ಅವರನ್ನು ನೇಮಕ ಮಾಡಲಾಗಿತ್ತು.

ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಬೆಂಗಳೂರಿನ ಐಟಿಸಿ ಹೋಟೆಲ್​ನಲ್ಲಿ ನಡೆದ ಬಿಎಲ್​ಪಿ ಸಭೆಯಲ್ಲಿ ಹೈಕಮಾಂಡ್ ವೀಕ್ಷಕರಾದ ನಿರ್ಮಲಾ, ದುಷ್ಯಂತ್ ಕುಮಾರ್ ಉಪಸ್ಥಿತರಿದ್ದರು. ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ರಾಜ್ಯ ಬಿಜೆಪಿ ಘಟಕದ ಸಂಘಟನಾ ಕಾರ್ಯದರ್ಶಿ ರಾಜೇಶ್ ಮತ್ತಿತರರು ಭಾಗವಹಿಸಿದ್ದರು.















































































error: Content is protected !!
Scroll to Top