ತ್ರಿವಿಧ ಜಿಗಿತ : ಜ್ಞಾನಸುಧಾದ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಹೊಸ ದಾಖಲೆ ನಿರ್ಮಿಸಿದ ಪ್ರಣಯ್ ಶೆಟ್ಟಿ

ಉಡುಪಿ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ರಜತಾದ್ರಿ ಹಾಗೂ ಕ್ರಿಯೆಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡು ಕ್ರಿಡಾಂಗಣದಲ್ಲಿ ಜರುಗಿದ ಉಡುಪಿ ಜಿಲ್ಲಾ ಪ.ಪೂ. ವಿದ್ಯಾರ್ಥಿಗಳ ಕ್ರೀಡಾ ಕೂಟದಲ್ಲಿ ಕಾರ್ಕಳ ಜ್ಞಾನಸುಧಾ ಪ.ಪೂ. ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ಪ್ರಥಮ ಪಿಯುಸಿ ವಿದ್ಯಾರ್ಥಿ ಪ್ರಣಯ್ ಶೆಟ್ಟಿ ತ್ರಿವಿಧ ಜಿಗಿತದಲ್ಲಿ 12.98 ಮೀ. ದೂರ ಜಿಗಿದು ಚಿನ್ನದ ಪದಕ ಪಡೆದಿರುತ್ತಾರೆ. ಈ ಮೂಲಕ ಪ್ರಣಯ್‌ ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಈತ ಕಳೆದ ವರ್ಷದ ತ್ರಿವಿಧ ಜಿಗಿತ ಸ್ಪರ್ಧೆಯ 12.47 ಮೀ. ದಾಖಲೆಯನ್ನು ಮುರಿದು ಹೊಸ ದಾಖಲೆ ಬರೆದಿರುತ್ತಾರೆ. ೧೦೦ ಮೀ. ಓಟದ ಸ್ಪರ್ಧೆಯಲ್ಲಿ ಕಂಚಿನ ಪದಕ ಹಾಗೂ ಉದ್ದ ಜಿಗಿತದಲ್ಲಿ ಕಂಚಿನ ಪದಕವನ್ನು ಪಡೆದಿರುತ್ತಾರೆ.

ಪ್ರಥಮ ಪಿಯುಸಿಯ ಕು. ಹರ್ಷಿಕಾ ಉದ್ದ ಜಿಗಿತ ಸ್ಪರ್ಧೆ ಹಾಗೂ 100 ಮೀ. ಓಟದ ಸ್ಪರ್ಧೆಯಲ್ಲಿ ಬೆಳ್ಳಿಯ ಪದಕ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಬಾಲಕರ ವಿಭಾಗದ 4*1೦೦ ಮೀ ರಿಲೇ ಸ್ಪರ್ಧೆಯಲ್ಲಿ ಕಾಲೇಜಿನ ಪ್ರಥಮ ಪಿಯುಸಿಯ ಪ್ರಣಯ್ ಶೆಟ್ಟಿ, ಹರ್ಷಿತ್ ಎಚ್. ಶೆಟ್ಟಿ, ಅಮೋಘ ಎಂ. ಶೆಟ್ಟಿ, ಸತ್ಯಪ್ರಸಾದ್ ರಾವ್‌ರನ್ನು ಒಳಗೊಂಡ ತಂಡವು ಕಂಚಿನ ಪದಕ ತಮ್ಮದಾಗಿಸಿಕೊಂಡಿದೆ. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿ ಅಭಿನಂದಿಸಿದ್ದಾರೆ.error: Content is protected !!
Scroll to Top