ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಹಾಗೂ ಮೈಸೂರಿನ ವಿಠಲ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಸ್ತುತಿ ಜೈನ್ ಎಚ್. ಬಿ. ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದ್ದಾರೆ. ಸ್ತುತಿ ಜೈನ್ ಬ್ರಹ್ಮರಾಜ್ ಎಚ್.ಡಿ ಮತ್ತು ಅನುರಾಧ ಕೆ.ಪಿ ದಂಪತಿ ಪುತ್ರಿ.
ಸಾಧಕ ವಿದ್ಯಾರ್ಥಿನಿಗೆ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಶುಭಹಾರೈಸಿದ್ದಾರೆ.
ರಾಜ್ಯಮಟ್ಟದ ಕರಾಟೆ ಸ್ಪರ್ಧೆ – ಜ್ಞಾನಸುಧಾದ ಸ್ತುತಿ ಜೈನ್‌ಗೆ ಬೆಳ್ಳಿ ಪದಕ
