ವಿದ್ಯುತ್‌ ತಂತಿ ತುಳಿದು ತಾಯಿ-ಮಗು ಸಾವು : 5 ಲ. ರೂ. ಪರಿಹಾರ

ಬೆಂಗಳೂರು: ರಸ್ತೆ ಮೇಲೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ತಾಯಿ ಹಾಗೂ 9 ತಿಂಗಳ ಹಸುಳೆ ಪತಿಯ ಎದುರಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಹೋಪ್ ಫಾರ್ಮ್ ಜಂಕ್ಷನ್ ಬಳಿ ಭಾನುವಾರ ನಡೆದಿದ್ದು, ಮೃತರ ಕುಟುಂಬಕ್ಕೆ ಸರಕಾರ ೫ ಲ. ರೂ. ಪರಿಹಾರ ಘೋಷಿಸಿದೆ.

ಮೃತರನ್ನು ಎಕೆಜಿ ಕಾಲೋನಿ ನಿವಾಸಿಗಳಾದ ಸೌಂದರ್ಯ ಮತ್ತು ಸುವೀಕ್ಷಾ ಎಂದು ಗುರುತಿಸಲಾಗಿದೆ. ಮುಂಜಾನೆ 6 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ತಮಿಳುನಾಡಿನಿಂದ ಬೆಂಗಳೂರಿಗೆ ಬಂದಿದ್ದ ತಾಯಿ ಹಾಗೂ ಮಗಳು, ವೈಟ್‌ಫೀಲ್ಡ್‌ನ ಕಾಡುಗೋಡಿಯಲ್ಲಿ ಬಸ್ ಇಳಿದು ನಡೆದುಕೊಂಡು ಮನೆಗೆ ತೆರಳುತ್ತಿದ್ದರು. ಈ ವೇಳೆ ರಸ್ತೆ ಮೇಲೆ ತುಂಡಾಗಿ ಬಿದ್ದಿದ್ದ ಕರೆಂಟ್ ವೈರ್ ತುಳಿದಿದ್ದಾರೆ. ಕ್ಷಣಾರ್ಧದಲ್ಲಿ ವಿದ್ಯುತ್ ಪ್ರವಹಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಸೌಂದರ್ಯ ಅವರ ಪತಿ ಸಂತೋಷ್‌ ಪಾರಾಗಿದ್ದಾರೆ.

ಬೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯದಿಂದ ವಿದ್ಯುತ್ ತಂತಿ ತುಳಿದು ತಾಯಿ ಹಾಗೂ 9 ತಿಂಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಸ್ಕಾಂ ಎಇ, ಎಇಇಯನ್ನು ಅಮಾನತುಗೊಳಿಸಿದ್ದೇವೆ ಎಂದು ಇಂಧನ ಸಚಿವ ಕೆ. ಜೆ. ಜಾರ್ಜ್‌ ಅವರು ಹೇಳಿದ್ದಾರೆ. ಈ ದುರ್ಘಟನೆಯಲ್ಲಿ ಸಂಬಂಧಿಕರನ್ನು ಕಳೆದುಕೊಂಡ ಕುಟುಂಬ ಸದಸ್ಯರಿಗೆ ರಾಜ್ಯ ಸರಕಾರ ತಲಾ 5 ಲಕ್ಷ ರೂ. ಪರಿಹಾರ ನೀಡಲಿದೆ ಎಂದು ತಿಳಿಸಿದ್ದಾರೆ.

ಈ ದುರದೃಷ್ಟಕರ ಸಾವುಗಳಿಗೆ ಕಾರಣವಾದ ಘಟನೆಯ ಕುರಿತು ನಾವು ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದೇವೆ. ಇದರ ವರದಿಯನ್ನು ಎದುರು ನೋಡುತ್ತಿದ್ದೇವೆ. ಈ ಅಪಘಾತಕ್ಕೆ ಕಾರಣರಾದ AE ಮತ್ತು AEEಗಳನ್ನು ಅಮಾನತುಗೊಳಿಸಲಾಗಿದೆ ಮತ್ತು ಇದಕ್ಕೆ ಕಾರಣಾದವರು ಮತ್ತಾರೇ ಇದ್ದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.error: Content is protected !!
Scroll to Top