ಚಿತ್ರದುರ್ಗ : ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮತ್ತೆ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರ ಬಂಧನವಾಗಿದೆ. ಎರಡನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ನ್ಯಾಯಾಲಯ ಜಾರಿ ಮಾಡಿದ ಅರೆಸ್ಟ್ ವಾರೆಂಟ್ ಮೇರೆಗೆ ಮುರುಘಾಶ್ರಿಯನ್ನು ಬಂಧಿಸಿದ್ದಾರೆ. ನ. 20 ರಂದು ಕೋರ್ಟ್ ಅರೆಸ್ಟ್ ವಾರೆಂಟ್ ಆದೇಶದ ಪ್ರತಿಪಡೆದುಕೊಂಡ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ನೇರವಾಗಿ ದಾವಣಗೆರೆಯ ವಿರಕ್ತ ಮಠಕ್ಕೆ ತೆರಳಿ ಮುರುಘಾಶ್ರೀಗಳನ್ನು ಬಂಧಿಸಿದ್ದಾರೆ.
ಮೊದಲ ಪೋಕ್ಸೋ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಶ್ರೀಗಳು ಈಗ ಎರಡನೇ ಪ್ರಕರಣದಲ್ಲಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ.