ಹೆಬ್ರಿ : ಹೆಬ್ರಿ ಎಸ್.ಆರ್. ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಪೂಜಿತ (17) ನ. 20ರಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮಾನಸಿಕ ಖಿನ್ನತೆಗೆ ಒಳಗಾಗಿ ಸೋಮವಾರ ಹೆಬ್ರಿ ಕಿನ್ನಿಗುಡ್ಡೆ ಎಸ್.ಆರ್. ಕಾಲೇಜ್ ಬಳಿ ನಿರ್ಮಾಣ ಹಂತದಲ್ಲಿರುವ ತನ್ನ ಮನೆಯ ಕೋಣೆಯೊಂದರಲ್ಲಿ ಕಬ್ಬಿಣದ ಜಂತಿಗೆ ಶಾಲು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಬ್ರಿ : ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ



























