ಉಡುಪಿ ಕೊಲೆ ಪ್ರಕರಣ : ಪ್ರಚೋದನಕಾರಿ ಪೋಸ್ಟ್‌ ಹಾಕಿದ ಯುವಕನ ವಿರುದ್ಧ ಕೇಸ್‌

ಉಡುಪಿ: ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಾಕಾರಿ ಪೋಸ್ಟ್​ಗಳನ್ನು ಹಂಚಿಕೊಂಡ ಯುವಕನ ವಿರುದ್ಧ ಕೇಸ್‌ ದಾಖಲಾಗಿದೆ.
ಶಿವಮೊಗ್ಗ ಮೂಲದ ಹಫೀಜ್ ಮೊಹಮ್ಮದ್ ವಿರುದ್ಧ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಸುಮೊಟ ಕೇಸ್ ದಾಖಲಾಗಿದೆ. ಅಪರಾಧ ಕೃತ್ಯಕ್ಕೆ ಪ್ರಚೋದನೆ, ಸಾರ್ವಜನಿಕ ಶಾಂತಿ ಕದಡುವ ಸಂಬಂಧ ಪೋಸ್ಟ್ ಹಿನ್ನೆಲೆ ಐಪಿಸಿ 155, 505(2) ಕಾಯ್ದೆಯಡಿ ಕೇಸ್ ದಾಖಲಿಸಲಾಗಿದೆ.
ಉಡುಪಿ ನೇಜಾರಿನ ನಾಲ್ವರ ಕೊಲೆ ಪ್ರಕರಣ ಸಂಬಂಧ ಹಫೀಜ್ ಮೊಹಮದ್ ತನ್ನ ಫೇಸ್​ಬುಕ್ ಖಾತೆಯಲ್ಲಿ ಪ್ರಚೋದನಾಕಾರಿ ಪೋಸ್ಟ್​ಗಳನ್ನು ಹಂಚಿಕೊಂಡಿದ್ದಾನೆ. ಪ್ರಿಪರೇಶನ್ ಇಲ್ಲದೆ ಪ್ರವೀಣ್ ಚೌಗಲೆಯನ್ನು ಕೊಲ್ಲುವ ಒಂದು ಸುಲಭದ ದಾರಿಯನ್ನು ನೇಜಾರಿನವರು ಕಳೆದುಕೊಂಡರು ಎಂದು ಘಟನೆ ಉಲ್ಲೇಖಿಸಿ ಪೋಸ್ಟ್ ಹಾಕಿದ್ದಾನೆ.error: Content is protected !!
Scroll to Top